Site icon TUNGATARANGA

ನೂತನ ಶಾಲಾ ಪಠ್ಯದಲ್ಲಿ ಭಗವದ್ಗೀತೆ, ಕುರಾನ್ ಎಲ್ಲಾ ಇರುತ್ತೆ: ಸಚಿವ ನಾಗೇಶ್

ಬೆಂಗಳೂರು:

ಈ ಶೈಕ್ಷಣಿಕ ವರ್ಷದಿಂದ ಶಾಲಾ ಪಠ್ಯಪುಸ್ತಕದಲ್ಲಿ ನೈತಿಕ ಶಿಕ್ಷಣವನ್ನು ಸೇರಿಸಲಾಗುವುದು. ಅದು ಕೇವಲ ಒಂದು ಧರ್ಮಕ್ಕೆ ಸೀಮಿತವಾಗುವುದಿಲ್ಲ. ಎಲ್ಲಾ ಧರ್ಮಗಳ ನೈತಿಕ ಮೌಲ್ಯಗಳನ್ನು ಕಲಿಸುವ ಪಠ್ಯಗಳನ್ನು ಸೇರಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಪಂಚತಂತ್ರ, ರಾಮಾಯಣ, ಮಹಾಭಾರತ, ಭಗವದ್ಗೀತೆ, ಕುರಾನ್ ಮತ್ತು ಇತರ ನೈತಿಕ ಶಿಕ್ಷಣಗಳನ್ನು ಕೂಡ ಸೇರಿಸಲಾಗುವುದು. ಸಮಿತಿಯೊಂದು ಪಠ್ಯಕ್ರಮವನ್ನು ನಿರ್ಧರಿಸಲಿದ್ದು ಈ ನೈತಿಕ ಶಿಕ್ಷಣದ ಪಠ್ಯಕ್ಕೆ ಪರೀಕ್ಷೆಯಿರುವುದಿಲ್ಲ ಎಂದು ಸಚಿವರು ವಿವರಿಸಿದರು.


ಮದ್ರಸಗಳಿಂದ ಅಥವಾ ಅಲ್ಪಸಂಖ್ಯಾತ ಸಮುದಾಯ ಮುಖಂಡರಿಂದ ನಮಗೆ ಬೇಡಿಕೆ ಬರದಿದ್ದರೂ ಕೂಡ ನಿಗದಿತ ಶಿಕ್ಷಣ ಮಕ್ಕಳಿಗೆ ಕೊಡಿಸಿ ಎಂದು ಪೋಷಕರಿಂದ ಬೇಡಿಕೆ ಬಂದಿದೆ. ಈ ಮೂಲಕ ಅಲ್ಪಸಂಖ್ಯಾತ ಸಮುದಾಯ ಮಕ್ಕಳು ಕೂಡ ಬೇರೆ ಮಕ್ಕಳಂತೆ ಶಾಲೆಗಳಲ್ಲಿ ಪಡೆಯುವ ನಿಗದಿತ ಶಿಕ್ಷಣವನ್ನು ಗಳಿಸಿ ಪೈಪೋಟಿ ಒಡ್ಡಲು, ಸ್ಪರ್ಧಾತ್ಮಕ ಪರೀಕ್ಷೆ ಮತ್ತು ವೃತ್ತಿಪರ ಕೋರ್ಸ್ ಗಳಿಸಲು ಸಹಾಯವಾಗುತ್ತದೆ ಎಂದರು.

Exit mobile version