Site icon TUNGATARANGA

ಸಮಾಜಘಾತುಕ ಶಕ್ತಿಗಳ ವಿರುದ್ದ ಕ್ರಮಕ್ಕೆ ಎಬಿವಿಪಿ ಒತ್ತಾಯ

ಶಿವಮೊಗ್ಗ: ಬೆಂಗಳೂರಿನ ಕಾವಲ್ ಬೈರಸಂದ್ರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜಘಾತುಕ ಶಕ್ತಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿಪರಿಷತ್ ವತಿಯಿಂದ ಇಂದು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
ಶಾಂತಿಯುತವಾಗಿರುವ ರಾಜ್ಯದಲ್ಲಿ ಶಾಂತಿ ಸುವ್ಯªಸ್ಥೆ ಕದಡುವ ಪ್ರಯತ್ನ ಪೂರ್ವ ನಿಯೋಜಿತವಾಗಿ ನಡೆದಿದೆ. ಪೊಲೀಸರು ಮಾಧ್ಯಮದವರ ಮೇಲೆ ಕಲ್ಲುತೂರಾಟ ನಡೆಸಿ ಸಾರ್ವಜನಿಕ ಆಸ್ತಿಗೆ ಹಾನಿಉಂಟು ಮಾಡಿರುವ ಪ್ರಯತ್ನ ನಡೆದಿದ್ದು, ಗೃಹ ಇಲಾಖೆ ಮತ್ತು ಗುಪ್ತಚರ ಇಲಾಖೆ ವಿಫಲತೆ ಎದ್ದು ಕಾಣುತ್ತಿದೆ ಎಂದು ದೂರಿದರು.
ತಕ್ಷಣವೇ ಸರ್ಕಾರ ಕ್ರಮ ಕೈಗೊಂಡು ಕಾನೂನು ಸುವ್ಯವಸ್ಥೆ ಹದಗೆಡಿಸುತ್ತಿರುವ ಕಿಡಿಗೇಡಿಗಳನ್ನು ಬಂಧಿಸಬೇಕು. ಹಾನಿಯಾದ ಖರ್ಚು ವೆಚ್ಚವನ್ನು ಹಾನಿ ಮಾಡಿದ ಪುಂಡರಿಂದಲೇ ವಸೂಲಿ ಮಾಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಬಿವಿಪಿ ಪ್ರಮುಖರಾದ ಪ್ರೇಮ್ ಕುಮಾರ್, ವಿವೇಕ್, ಪ್ರೇಮ, ಪ್ರಜ್ವಲ್, ನಿರಂಜನ

Exit mobile version