Site icon TUNGATARANGA

ಶಾಲೆ ಆರಂಭದ ಬಗ್ಗೆ ಸಚಿವರ ಸ್ಪಷ್ಟನೆ

ಮಂಡ್ಯ, ಆ.13: ಕೊರೋನಾ ಭೀತಿ ನಡುವೆ ರಾಜ್ಯದಲ್ಲಿ ಸೆಪ್ಟೆಂಬರ್​​​​​​ನಿಂದ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಗೊಂದಲಗಳು ಸಹ ಮೂಡಿವೆ. ಆದರೆ ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸ್ಪಷ್ಟನೆ ನೀಡಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ನಮ್ಮ ಮುಂದೆ ದೊಡ್ಡ ಸವಾಲು ಇದೆ. ಮುಂದಿನ ಶೈಕ್ಷಣಿಕ ದಿನಗಳು ಹೇಗೆ ಎಂದು ಯೋಚನೆ ಮಾಡುವಂತಾಗಿದೆ. ಸುರೇಶ್ ಕುಮಾರ್ ಶಾಲೆ ಪ್ರಾರಂಭ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂಬ ಬಿರುದನ್ನೂ ನನಗೆ ಕೊಟ್ಟಿದ್ದಾರೆ. ಖಂಡಿತ ಯಾವುದೇ ಕಾರಣಕ್ಕೂ ಸೆಪ್ಟೆಂಬರ್​ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ ಎಂದು ಸಚಿವ ಸುರೇಶ್​ ಕುಮಾರ್​ ಸ್ಪಷ್ಟಪಡಿಸಿದ್ದಾರೆ.

Exit mobile version