Site icon TUNGATARANGA

ಅಕ್ರಮ ತಡೆಗೆ ಕಾನೂನಿಗೆ ತಿದ್ದುಪಡಿ: ಆರಗ

ಶಿವಮೊಗ್ಗ,
ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ತಡೆಗಟ್ಟಲು ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಪಿಎಸ್‌ಐ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮವಾಗಿ ರುವುದು ನಿಜ. ಅವ್ಯವಹಾರಗಳನ್ನು ಕಂಡುಹಿಡಿಯಲು ಈಗಾಗಲೇ ತನಿಖೆ

ನಡೆಸಲಾಗುತ್ತಿದೆ. ಮರುಪರೀಕ್ಷೆ ನಡೆಸುವುದು ಸರ್ಕಾರಕ್ಕೆ ಅನಿವಾರ್ಯವಾಗಿದೆ. ಹಾಗಾಗಿಯೇ ಸದ್ಯದರ ಲ್ಲಿಯೇ ಮರುಪರೀಕ್ಷೆಯನ್ನು ನಡೆಸಲಾಗುವುದು. ಈ ಹಿಂದೆ ಪರೀಕ್ಷೆ ಬರೆದವರು ಮಾತ್ರ ಅರ್ಹರಾಗಿರುತ್ತಾರೆ. ಅಕ್ರಮದಲ್ಲಿ ಭಾಗಿಯಾದವರನ್ನು ಪರೀಕ್ಷೆಯಿಂದ ಹೊರಗಿಡಲಾಗುವುದು. ಇದರಿಂದಾಗಿ ಹಿಂದಿನ ಪರೀಕ್ಷೆಯಲ್ಲಿ ಅವಕಾಶ ವಂಚಿತರಾದವರಿಗೆ ಅನುಕೂಲವಾಗಲಿದೆ ಎಂದರು.


ಈ ನೇಮಕಾತಿ ಅಕ್ರಮ ಸರ್ಕಾರದ ಕಣ್ಣು ತೆರೆಸಿದೆ. ಹೊಸ ತಂತ್ರಜ್ಞಾನವನ್ನು ಬಳಸಲಾಗಿದೆ. ಇದಕ್ಕೆ ತಕ್ಕಂತೆ ಪರೀಕ್ಷಾ ಪದ್ಧತಿಯನ್ನು ಬದಲಾಯಿಸಲಾಗುವುದು. ಅವ್ಯವಹಾರ ತಡೆಯಲು ಸರ್ಕಾರ ಎಲ್ಲರೀತಿಯ ಕ್ರಮ ತೆಗೆದುಕೊಳ್ಳಲಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಾರದು ಎಂಬುದೇ ನಮ್ಮ ಉದ್ದೇಶವಾಗಿದೆ. ಈ ಎಲ್ಲ ಹಿನ್ನೆಲೆಯಲ್ಲಿ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗಿದವರು ಜೈಲಿನಿಂದಲೇ ಹೊರಬಾರದಂತೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಇದಕ್ಕ ಪೂರಕವಾಗಿ ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದರು.

Exit mobile version