ಸಾಗರ, ಏ.೩೦:
ನಗರದ ಹೃದಯ ಭಾಗದಲ್ಲಿರುವ ಗಣಪತಿ ಕೆರೆ ಸುತ್ತಲಿನ ಪ್ರದೇಶವನ್ನು ಅಭಿವೃದ್ಧಿಗೊಳಿಸಿ ಕೆರೆಯ ಸೌಂದರ್ಯವರ್ಧನೆಗೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ೬ ಕೋಟಿ ಬಿಡುಗಡೆ ಮಾಡಿದೆ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ತಿಳಿಸಿದರು.
ಕೆರೆಯಲ್ಲಿ ನೀರು ಸಮೃದ್ಧವಾಗಿದ್ದರೆ ನಗರದ ಕುಡಿಯುವ ನೀರಿನ ಬಾವಿಗಳಲ್ಲೂ ನೀರಿನ ಪ್ರಮಾಣ ಅಧಿಕವಾಗಿರುತ್ತದೆ. ಈ ಕಾರಣ ಗಣಪತಿ ಕೆರೆಯನ್ನು ಅಭಿವೃದ್ಧಿಗೊಳಿಸಲು ಒತ್ತು ನೀಡಲಾಗುತ್ತಿದೆ. ಗಣಪತಿ ಕೆರೆ ಮಧ್ಯ ಭಾಗದಲ್ಲಿ ಜೆಟ್ ಅಳವಡಿಸಿ ನೀರು ಉಕ್ಕುವಂತೆ ಮಾಡಲಾಗುವುದು. ಕೆರೆಯ ಸುತ್ತಲೂ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಿ ವಿದ್ಯುತ್ ದೀಪಗಳಿಂದ ಕಂಗೊಳಿಸುವಂತೆ ಮಾಡಲಾಗುವುದು ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ.ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್, ಪೌರಾಯುಕ್ತ ರಾಜು ಡಿ.ಬಣಕಾರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಚ್.ಕೆ.ನಾಗಪ್ಪ, ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಕೃಷ್ಣಮೂರ್ತಿ, ಮನು, ಜಗದೀಶಯ್ಯ, ಹಾಲೇಶಪ್ಪ ಇದ್ದರು.