Site icon TUNGATARANGA

ರಾಜ್ಯ ಸರ್ಕಾರದ ಅಕ್ರಮಕ್ಕೆ ಕೇಂದ್ರ ಗೃಹ ಸಚಿವರ ಅಂಕಿತ

ಬೆಂಗಳೂರು, ಮೇ.೦೪:
ರಾಜ್ಯ ಬಿಜೆಪಿ ಸರ್ಕಾರದ ಅಕ್ರಮಕ್ಕೆ ಕೇಂದ್ರ ಗೃಹ ಸಚಿವರ ಅಂಕಿತ ಒತ್ತಿದ್ದಾರೆ, ನಿನ್ನೆ ಅಮಿತ್ ಶಾ ಬೆಂಗಳೂರಿಗೆ ಬಂದು ಹೋಗಿದ್ದಾರೆ. ಬೊಮ್ಮಾಯಿ ಸರ್ಕಾರಕ್ಕೆ ಶಹಬ್ಬಾಸ್ ಗಿರಿ ಕೊಟ್ಟು ಹೋಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮುಳುವಾಗಿರುವ ಪಿಎಸ್‌ಐ ನೇಮಕಾತಿ ಅಕ್ರಮ, ೪೦% ಕಮಿಷನ್ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾ ಮಯ್ಯ ಕಾಮನ್ ಮ್ಯಾನ್ ಸರ್ಕಾರವೆಂದು ಅರುಣ್ ಸಿಂಗ್ ಹೇಳಿದ್ದಾರೆ. ೪೦ ಪರ್ಸೆಂಟ್ ಕಮಿಷನ್ ಸರ್ಕಾರಕ್ಕೆ ಸಹಮತ ನೀಡಿದ್ದಾರೆ. ರಾಜ್ಯ ಸರ್ಕಾರದ ಕ್ರಮಕ್ಕೆ ಕೇಂದ್ರ ಸರ್ಕಾರ ಮುದ್ರೆ ಒತ್ತಿದೆ ಎಂದು ದೂರಿದ್ದಾರೆ.


೪೦ ಪರ್ಸೆಂಟ್ ಕಮಿಷನ್ ಸರ್ಕಾರವೆಂದು ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಸಂತೋಷ್ ಪಾಟೀಲ್ ಹೇಳಿದ್ದರು. ಮಠಕ್ಕೆ ಬಿಡುಗಡೆಯಾದ ಅನುದಾನಕ್ಕೂ ೪೦ ಪರ್ಸೆಂಟ್ ಕೊಡಬೇಕು. ರಾಜ್ಯ ಸರ್ಕಾರದ ವಿರುದ್ಧ ಸ್ವಾಮೀಜಿ ಆರೋಪ ಮಾಡಿದ್ದರು. ಬಿಬಿಎಂಪಿ ವಿರುದ್ಧವೂ ೪೦ ಪರ್ಸೆಂಟ್ ಆರೋಪ ಕೇಳಿಬಂದಿತ್ತು. ಗೋಶಾಲೆಗೆ ಬಿಡುಗಡೆಯಾದ ಹಣಕ್ಕೂ ೪೦ ಪರ್ಸೆಂಟ್ ಕೊಡಬೇಕು. ಸರ್ಕಾರದ ವಿರುದ್ಧ ಇಷ್ಟೆಲ್ಲಾ ಆರೋಪ ಕೇಳಿಬಂದರೂ ಬೆಂಗಳೂರಿಗೆ ಬಂದಿದ್ದ ಕೇಂದ್ರ ಬಿಜೆಪಿ ನಾಯಕರಿಂದ ಮೆಚ್ಚುಗೆ ನೀಡಿದ್ದಾರೆ. ಇದರ ಅರ್ಥ ರಾಜ್ಯ ಸರ್ಕಾರದ ಅಕ್ರಮಕ್ಕೆ ಕೇಂದ್ರ ಸಹಮತವಿದೆ ಎಂದು ಸಿದ್ದರಾಮಯ್ಯ ಹೇಳಿದರು.


ನಮ್ಮ ಸರ್ಕಾರದ ವಿರುದ್ಧ ೧೦ ಪರ್ಸೆಂಟ್ ಸರ್ಕಾರವೆಂದು ಹೇಳಿದ್ರು. ಯಾವುದೇ ದಾಖಲೆ ಇಲ್ಲದೆ ಮೋದಿ ಆರೋಪ ಮಾಡಿದ್ದರು. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ೪೦ ಪರ್ಸೆಂಟ್ ಬಗ್ಗೆ ಪ್ರಧಾನಿ ಮೋದಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದು ತಿಳಿಸಿದ್ದರು. ಆದರೆ, ಪ್ರಧಾನಿ ಮೋದಿ ಈವರೆಗೆ ಯಾವುದೇ ಕ್ರಮಕೈಗೊಂಡಿಲ್ಲ. ನಾನು ತಿನ್ನಲ್ಲ ತಿನ್ನಲು ಬಿಡಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ರಾಜ್ಯ ಸರ್ಕಾರದ ೪೦ ಪರ್ಸೆಂಟ್ನಲ್ಲಿ ಕೇಂದ್ರಕ್ಕೆ ಪಾಲಿದೆ ಅಂದರ್ಥ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.


ಕಾಂಗ್ರೆಸ್ ವಿರುದ್ಧ ಶೇ ೧೦ರಷ್ಟು ಕಮಿಷನ್ ಆರೋಪ ಮಾಡಿದ ಬಿಜೆಪಿ ಈಗ ೪೦% ಕಮಿಷನ್ ಗಳಿಸುತ್ತಿದೆ. ಈ ಬಗ್ಗೆ ತನಿಖೆ ನಡೆಸುತ್ತಿಲ್ಲ. ಆರೋಪಿ ತರನ್ನು ಬಂಧಿಸುವಲ್ಲಿ ವಿಳಂಬ ಮಾಡುವ ಮೂಲಕ ತನಿಖೆ ಹಾದಿ ದಿಕ್ಕು ತಪ್ಪಿಸಿದ್ದಾರೆ. ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪಾಲ್ ವರ್ಗಾವಣೆ ಮಾಡುವ ಮೂಲಕ ಅಕ್ರಮದ ತನಿಖೆ ಕುಂಠಿತಗೊಳಿಸಲಾಗಿದೆ ಎಂದಿದ್ದಾರೆ.

Exit mobile version