Site icon TUNGATARANGA

ತಪ್ಪಿತಸ್ಥರು ಮುಟ್ಟಿ ನೋಡಿಕೊಳ್ಳುವಂತೆ ಮಾಡ್ತೀವಿ: ಸಚಿವ ಆರಗ ಜ್ಞಾನೇಂದ್ರ

ಕಲಬುರಗಿ, ಮೇ 06
ಪಿಎಸ್‌ಐ ನೇಮಕಾತಿ ಹಗರಣ ಸಂಬಂಧ ಸರ್ಕಾರ ಬೇರು ಮಟ್ಟದ ತನಿಖೆ ನಡೆಸುತ್ತಿದ್ದು, ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ತಪ್ಪಿತಸ್ಥರು ಮುಟ್ಟಿ ನೋಡಿಕೊಳ್ಳುವಂತೆ ಮಾಡುತ್ತೇವೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಕಾಂಗ್ರೆಸ್‌ನವರು ಸರಕಾರದ ಕೆಲ ಸಚಿವರ ತೇಜೋವಧೆ ಮಾಡುತ್ತಿದ್ದಾರೆ. ತನಿಖೆ ಪಾರದರ್ಶ ಕವಾಗಿ ನಡೆಯುತ್ತಿದ್ದು, ಹಗರಣ ಮಾಡುವವರು ಭವಿಷ್ಯದಲ್ಲಿ ಮುಟ್ಟಿ ನೋಡಿಕೊಳ್ಳುವಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದೇ ವೇಳೆ ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ೩೦೦ ಕೋಟಿ ರೂ ಅಕ್ರಮ ನಡೆದಿದೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದ ಅವರು. ಸಿದ್ದರಾಮಯ್ಯ ೩೦೦ ಕೋಟಿ ಅಲ್ಲ ೩,೦೦೦ ಕೋಟಿ ಆರೋಪ ಮಾಡಲಿ, ಮಾತಾಡೋಕೆ ಅವರಿಗೆ ವಾಕ್ ಸ್ವಾತಂತ್ರ್ಯ ಇದೆ. ನಿರಾಧಾರವಾಗಿ ಆರೋಪ ಮಾಡೋದು, ದಾಖಲಾತಿ ಕೇಳಿದರೆ, ಓಡಿಹೋಗೋದು ಕಾಂಗ್ರೆಸ್ ಕೆಲಸ. ಪ್ರಕರಣದಲ್ಲಿ ಸಿಲುಕಿದವರು ಬಹುತೇಕ ಕಾಂಗ್ರೆಸ್?ನವರೇ ಎಂದು ತಿಳಿಸಿದರು.


ವಿಶೇಷ ಅಭಿಯೋಜಕರ ನೇಮಕ
ಬಳಿಕ ತಾಜ ಸುಲ್ತಾನಪುರದಲ್ಲಿರುವ ಕೆಎಸ್‌ಆರ್ ಪಿ ೬ನೇ ಪಡೆಯ ಹೆಚ್ಚುವರಿ ತರಬೇತಿ ಶಾಲೆಯ ಆವರಣದಲ್ಲಿ ಶುಕ್ರವಾರ ನಡೆದ ವಿಶೇಷ ಮೀಸಲು ಪೊಲೀಸ್ ಕಾನ್ ಸ್ಟೆಬಲ್ ಪ್ರಶಿಕ್ಷಣಾ ರ್ಥಿಗಳ ೪ನೇ ತಂಡದ ನಿರ್ಗಮನ ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ೫೪೫ ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಅನುವಾಗುವಂತೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲಾಗುವುದು ಎಂದು ಹೇಳಿದರು.

Exit mobile version