ತುಮಕೂರು : ರಾಜ್ಯದ ಶಾಲಾ ಮಕ್ಕಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು ಈ ಸಾಲಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗುವುದು ಹಾಗೂ ರಾಜ್ಯದ ದರ್ಶನಕ್ಕೂ ಅವಕಾಶ ಕಲ್ಪಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ತುಮಕೂರಿನ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಧಾಲಾ ಪ್ರಾರಂಭೋತ್ಸವಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಿ ಮಾತನಾಡಿದ ಅವರು, ಇದೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗುವುದು ಹಾಗೂ ರಾಜ್ಯದ ದರ್ಶನಕ್ಕೂ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳ ಜೊತೆಗೆ ಸಂವಾದ ನಡೆಸಿದ ಸಿಎಂ ಬೊಮ್ಮಾಯಿ, ಅವರು ಈ ವೇಳೆ ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಸವರಾಜ್ ಬೊಮ್ಮಯಿಅವರು ಕಳೆದ ಎರಡು ವರ್ಷಗಳಿಂದ ಕೋವಿಡ್ 19 ಕಾರಣದಿಂದಾಗಿ ರಾಜ್ಯದ ಎಲ್ಲಾ ಶಾಲೆಗಳು ನಡೆದಿಲ್ಲ. ಹೀಗಾಗಿ ಸೈಕಲ್‌ಅನ್ನು ಕೊಡಲು ಸಾಧ್ಯವಾಗಿಲ್ಲ. ಈ ವರ್ಷ ಸೈಕಲ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಪ್ರತಿ ವರುಷ ಕ್ರೀಡಾ ಚಟುವಟಿಕೆಗಳಿಗೆ 5 ಕೋಟಿ ರೂ. ವ್ಯಯ ಮಾಡಲಾಗುತ್ತಿತ್ತು. ಈ ವರ್ಷ10 ಕೋಟಿ ರೂ. ವೆಚ್ಚ ಮಾಡಿ ಕ್ರೀಡಾ ಸಾಮಾಗ್ರಿಗಳನ್ನು ಕೊಡಲಸು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ವಿದ್ಯಾರ್ಥಿಗಳಿಗೆ ಶುಚಿತ್ವ ಪ್‌ಐಆಡ್, ಶಾಲಾ ಮಕ್ಕಳಿಗೆ ವ್ಯಾಕ್ಸಿನ್ ಕ್ಸಿನ್, ಪೌಷ್ಠಿಕಾಂಶ ಕೊರತೆ ನಿಗಿಸಲು ಸಿರಿಧಾನ್ಯ,6 ನೇ ತರಗತಿ ಮೇಲ್ಪಟ್ಟ ಹೆಣ್ಣುಮಕ್ಕಳಿಗೆ ರೆಸ್ಟ್ ರೂಂ,6500 ಶಾಲಾ ಕಟ್ಟಡ, ಶಾಲಾ ಮಕ್ಕಳಿಗೆ ಗುರುತಿನ ಚೀಟಿ ಸೇರಿದಂತೆ ಹಲವು ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.