Site icon TUNGATARANGA

ಮೇ 25 ರಂದು ಭಾರತ್ ಬಂದ್‌ ?

ಮೇ 25 ರಂದು ಭಾರತ್ ಬಂದ್ ನಡೆಯಲಿದೆ. ಅಖಿಲ ಭಾರತ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನೌಕರರ ಒಕ್ಕೂಟವು ಬುಧವಾರ ಅಂದರೆ ಮೇ 25 ರಂದು ಭಾರತ್ ಬಂದ್‌ಗೆ ಕರೆ ನೀಡಿದೆ. ಈ ವೇಳೆ ಹಲವಾರು ವಹಿವಾಟುಗಳು ವ್ಯತ್ಯಯವಾಗುವ ಸಾಧ್ಯತೆ ಇದೆ.

ಒಬಿಸಿ ಆಧಾರಿತ ಜನಗಣತಿ ನಡೆಸಬೇಕೆಂದು ಹಲವಾರು ರಾಜಕೀಯ ನಾಯಕರುಗಳು, ಸಂಘಟನೆಗಳು ಒತ್ತಾಯ ಮಾಡಿದ್ದವು.

ಆದರೆ ಕೇಂದ್ರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿಲ್ಲ. ಈಗಾಗಲೇ ಜನಗಣತಿಯ ಎಲ್ಲಾ ಸಿದ್ಧತೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿತ್ತು.

ಈಗ ಸರ್ಕಾರದ ನಡೆಯನ್ನು ವಿರೋಧ ಮಾಡಿ ಭಾರತ್ ಬಂದ್‌ಗೆ ಅಖಿಲ ಭಾರತ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನೌಕರರ ಒಕ್ಕೂಟವು ಕರೆ ನೀಡಿದೆ ಎಂದು ಬಹುಜನ ಮುಕ್ತಿ ಪಕ್ಷದ (ಬಿಎಂಪಿ) ಸಹರಾನ್‌ಪುರ ಜಿಲ್ಲಾ ಅಧ್ಯಕ್ಷ ನೀರಜ್ ಧಿಮಾನ್ ಮಾಹಿತಿ ನೀಡಿದ್ದಾರೆ.

ಹಾಗೆಯೇ ಬಿಎಂಪಿ ಅಧ್ಯಕ್ಷರು ಚುನಾವಣೆಯಲ್ಲಿ ಇವಿಎಂಗಳ ಬಳಕೆ ಮತ್ತು ಖಾಸಗಿ ವಲಯಗಳಲ್ಲಿ ಎಸ್‌ಸಿ/ಎಸ್‌ಟಿ/ಒಬಿಸಿಗೆ ಮೀಸಲಾತಿಯನ್ನು ಜಾರಿಗೊಳಿಸದಿರುವುದನ್ನು ವಿರೋಧ ಮಾಡಲಾಗಿದೆ. ಬಹುಜನ ಮುಕ್ತಿ ಪಕ್ಷದ ಹಂಗಾಮಿ ರಾಜ್ಯಾಧ್ಯಕ್ಷ ಡಿಪಿ ಸಿಂಗ್ ಭಾರತ್ ಬಂದ್ ಅನ್ನು ಯಶಸ್ವಿಗೊಳಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

Exit mobile version