Site icon TUNGATARANGA

ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ


ಶಿವಮೊಗ್ಗ ಮೇ
      ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2022-23 ನೇ ಸಾಲಿಗೆ ಆಡಳಿತ ನ್ಯಾಯಾಧಿಕರಣ ಯೋಜನೆಯಡಿ ಜಿಲ್ಲಾ ವ್ಯಾಪ್ತಿಗೊಳಪಡುವ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ ಶಿಷ್ಯವೇತನ ನೀಡಲು ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.


    ಅರ್ಹ ಅಭ್ಯರ್ಥಿಗಳು ಆನ್‍ಲೈನ್ https://tw.kar.nic.in ಮೂಲಕ ಮೇ 31 ರಿಂದ ಆನ್‍ಲೈನ್‍ನಲ್ಲಿ ಸಲ್ಲಿಸಿದ ಅರ್ಜಿ ಪ್ರತಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಇಲ್ಲಿಗೆ ಜುಲೈ 05 ರೊಳಗಾಗಿ ಸಲ್ಲಿಸುವುದು.


   ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕಿದ್ದು, 40 ವರ್ಷ ವಯೋಮಿತಿಗೊಳಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಗೊಳಿಸಿರುವ ಕೊನೆಯ ದಿನಾಂಕಕ್ಕೆ 02 ವರ್ಷದ ಒಳಗೆ ಕಾನೂನು ಪದವಿಯನ್ನು ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.2.5 ಲಕ್ಷ ಮೀರಿರಬಾರದು. ವಕೀಲರ ಸಂಘದಲ್ಲಿ ಅಭ್ಯರ್ಥಿಯು ಹೆಸರನ್ನು ನೋಂದಾಯಿಸಿರಬೇಕು. ತರಬೇತಿ ಅವಧಿ 02 ವರ್ಷಗಳಾಗಿದ್ದು ಮಾಸಿಕ ರೂ.10,000/- ಶಿಷ್ಯ ವೇತನ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಹಿರಿಯ ವಕೀಲರಲ್ಲಿ ತರಬೇತಿಗೆ ನಿಯೋಜಿಸಲಾಗುವುದು.


           ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ : 08182-279222, 9482762350 ನ್ನು ಸಂಪರ್ಕಿಸಬಹುದೆಂದು 

Exit mobile version