Site icon TUNGATARANGA

ಸಚಿವ ಬಿ.ಸಿ ನಾಗೇಶ್ ಅವರ ನಿವಾಸಕ್ಕೆ ನುಗ್ಗಿ ದಾಂಧಲೆ :ದುಷ್ಕರ್ಮಿಗಳ ವಿರುದ್ಧ ಕ್ರಮ : ಸಿಎಂ ಬೊಮ್ಮಾಯಿ

ಪ್ರಾಥಮಿಕ ಹಾಸಚಿವ ಬಿ.ಸಿ ನಾಗೇಶ್ ಅವರ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರಿನಲ್ಲಿರುವ ಅವರ ನಿವಾಸದಲ್ಲಿ ನಡೆದಿದೆ.

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ NSUI ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿದ್ದು ಈ ಸಂಬಂಧ 15 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಘಟನೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇಂತಹ ನಡೆ ವಿದ್ಯಾರ್ಥಿಗಳಿಗೆ, ಸರಿಯಲ್ಲ ಎಂದಿದ್ದಾರೆ

.

Exit mobile version