Site icon TUNGATARANGA

ಸಿಎಂ ಬೊಮ್ಮಯಿ ಚಾರ್ಲಿ 777 ನೋಡಿ ಕಣ್ಣೀರು ಹಾಕಿದ್ದು ಯಾಕೆ ಗೋತ್ತಾ

ಸಿಎಂ ಬಸವರಾಜ ಬೊಮ್ಮಾಯಿ ಮೃದು ವ್ಯಕ್ತಿತ್ವವುಳ್ಳ ಭಾವುಕ ಜೀವಿ. ಸಿನಿಮಾ ಸೇರಿದಂತೆ ವಿವಿಧ ಕಲಾ ಪ್ರಕಾರಗಳ ಬಗ್ಗೆ ಅಪಾರ ಪ್ರೀತಿ, ಗೌರವುಳ್ಳ ಸಿಎಂ ನಿನ್ನೆ ಒರಾಯಿನ್ ಮಾಲ್‌ನಲ್ಲಿ ‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ್ದಾರೆ.

ಕೆಲವು ತಿಂಗಳ ಹಿಂದಷ್ಟೆ ತಮ್ಮ ಮುದ್ದಿನ ನಾಯಿಯನ್ನು ಕಳೆದುಕೊಂಡಿದ್ದರು.

ತಮ್ಮ ಪ್ರೀತಿಯ ನಾಯಿ ಕಳೆದುಕೊಂಡ ದಿನ ಕುಟುಂಬ ಸದಸ್ಯನನ್ನು ಕಳೆದುಕೊಂಡಂತೆ ಕಣ್ಣೀರು ಹಾಕಿದ್ದ ಸಿಎಂ, ನಿನ್ನೆ ರಾತ್ರಿ ‘777 ಚಾರ್ಲಿ’ ನೋಡಿ ಅಗಲಿದ ತಮ್ಮ ಪ್ರೀತಿಯ ನಾಯಿಯನ್ನು ನೆನದು ಕಣ್ಣೀರು ಹಾಕಿದ್ದಾರೆ.

ಸಿನಿಮಾವನ್ನು ಮಧ್ಯಂತರದವರೆಗೆ ನೋಡಿ ಬಂದು ಮಾಧ್ಯಮ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ”ಈಗಿನನ್ನೂ ಅರ್ಧ ಸಿನಿಮಾ ನೋಡಿದ್ದೇವೆ. ಸಿನಿಮಾದಲ್ಲಿ ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧದ ಬಗ್ಗೆ ಹೇಳಲಾಗಿದೆ. ಅದರಲ್ಲಿಯೂ ಶ್ವಾನ, ಮನುಷ್ಯನನ್ನು ಅತಿಯಾಗಿ ಪ್ರೀತಿಸುವ ಪ್ರಾಣಿ, ಅದರ ಬಗ್ಗೆ ಕತೆ ಮಾಡಲಾಗಿದೆ. ಶ್ವಾನ ಮತ್ತು ಮನುಷ್ಯನ ನಡುವಿನ ಸಂಬಂಧವನ್ನು ಮಾರ್ಮಿಕವಾಗಿ, ಸೂಕ್ಷ್ಮವಾಗಿ ಹಾಗೂ ಭಾವನಾತ್ಮಕವಾಗಿ ನಿರ್ದೇಶಕ ಕಿರಣ್ ರಾಜ್ ಹೇಳಿದ್ದಾರೆ” ಎಂದಿದ್ದಾರೆ.

Exit mobile version