Site icon TUNGATARANGA

ತನಿಖೆ ನಂತರ ರಾಹುಲ್ ಮೇಲಿನ ಆರೋಪ ಪತ್ತೆ: BYS

ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆಯ ನಂತರ ಸತ್ಯಾಸತ್ಯತೆ ಹೊರ ಬರುತ್ತದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಪ್ಪು ಮಾಡಿರದಿದ್ದರೆ ಆರೋಪ ಮುಕ್ತರಾಗಿ ಹೊರ ಬರು ತ್ತಾರೆ. ಆರೋಪ ಸಾಬೀತಾದರೆ ಸಹಜವಾಗಿ ಶಿಕ್ಷೆಯಾಗುತ್ತದೆ ಎಂದು ಶಾಸಕ ಬಿ.ಎಸ್.ಯಡಿಯೂರಪ್ಪ ಹೇಳಿದರು.


ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ’ಇಡಿ ಅಧಿಕಾರಿಗಳಿಗೆ ಅನುಮಾನ ಬಂದವರ ವಿರುದ್ಧ ತನಿಖೆ ಮಾಡು ತ್ತಾರೆ. ಕಾನೂನಿನ ಚೌಕಟ್ಟಿನಲ್ಲಿ ಎಲ್ಲರೂ ಒಂದೇ.ರಾಹುಲ್ ಗಾಂಧಿ, ಯಡಿಯೂರಪ್ಪ ಬೇರೆ, ಬೇರೆ ಎಂಬ ಪ್ರಶ್ನೆಯೇ ಇಲ್ಲ. ತನಿಖೆ ನಡೆಯುತ್ತಿದೆ ಏನಾಗುತ್ತದೆ ಎಂಬುವುದನ್ನು ಕಾದು ನೋಡೋಣ’ ಎಂದರು.


ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿ.ವೈ.ವಿಜಯೇಂದ್ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದು ಖಚಿತ. ಆದರೆ, ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವುದು ಇನ್ನೂ ತೀರ್ಮಾನ ವಾಗಿಲ್ಲ ಎಂದು ತಿಳಿಸಿದರು.
ಮುಂದಿನ ಚುನಾವಣೆಯಲ್ಲಿ ೧೪೦ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಈ ನಿಟ್ಟಿನಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಆರಂಭ ಮಾಡಿದ್ದೇವೆ. ಎಲ್ಲಾ ವರ್ಗದ ಜನರನ್ನು ತಮ್ಮ ಜೊತೆಗೆ ತೆಗೆದುಕೊಂಡು ಹೋಗುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

Exit mobile version