Site icon TUNGATARANGA

ಜೂ.21ರಂದು ತೀರ್ಥಹಳ್ಳಿ, ಇಕ್ಕೇರಿ ಹಾಗೂ ಭದ್ರಾವತಿಯಲ್ಲಿ ಯೋಗ ದಿನಾಚರಣೆ

ತೀರ್ಥಹಳ್ಳಿ/ ಜೂ. 21 ರಂದು ಶ್ರೀ ರಾಮೇಶ್ವರ ದೇವಸ್ಥಾನ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶಿವಮೊಗ್ಗ ಜೂ.19:
ಭಾರತ ಮತ್ತು ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಕಚೇರಿ, ಶಿವಮೊಗ್ಗ, ತಾಲ್ಲೂಕು ಪಂಚಾಯಿತಿ ತೀರ್ಥಹಳ್ಳಿ ಇವರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ತೀರ್ಥಹಳ್ಳಿ, ತಾಲ್ಲೂಕಿನ ವಿವಿಧ ಸಂಘ ಸಂಸ್ಥೆಗಳು, ಎನ್‍ಎಸ್‍ಸ್ ಮತ್ತು ಎನ್‍ಸಿಸಿ ಘಟಕಗಳು ಇವರ ಸಹಯೋಗದೊಂದಿಗೆ 8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 21 ರ ಬೆಳಿಗ್ಗೆ 6.45 ಕ್ಕೆ ಶ್ರೀ ರಾಮೇಶ್ವರ ದೇವಸ್ಥಾನ ಆವರಣ ತೀರ್ಥಹಳ್ಳಿ ಇಲ್ಲಿ ಆಯೋಜಿಸಲಾಗಿದೆ.
ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ. ನಾರಾಯಣಗೌಡ ಇವರ ಗೌರವಾನ್ವಿತ ಉಪಸ್ಥಿತಿ ಇರಲಿದ್ದು ಗೃಹ ಸಚಿವರಾದ ಆರಗ ಜ್ಞಾನೇಂದ್ರ ಇವರು ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವರಾದ ಡಾ.ಸುಧಾಕರ್.ಕೆ ಇವರ ಘನ ಉಪಸ್ಥಿತಿ ಇರಲಿದ್ದು, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಇವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷರು, ತೀರ್ಥಹಳ್ಳಿ ಪ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ರಂಗಾಯಣ ನಿರ್ದೇಶಕರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಯೋಜನಾಧಿಕಾರಿ, ಆಯುಷ್ ಇಲಾಖೆ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಆಯುಷ್ ಅಧಿಕಾರಿಗಳು, ವಿವಿಧ ಯೋಗ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.

ಭದ್ರಾವತಿ/ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶಿವಮೊಗ್ಗ,ಜೂ.19:
ಭಾರತ ಮತ್ತು ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಕಚೇರಿ, ಶಿವಮೊಗ್ಗ, ತಾಲ್ಲೂಕು ಪಂಚಾಯಿತಿ ಭದ್ರಾವತಿ ಇವರ ವತಿಯಿಂದ ಟಿಎಂಎಇಎಸ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಭದ್ರಾವತಿ, 8ನೇ ಬೆಟಾಲಿಯನ್ ಕೆಎಸ್‍ಆರ್‍ಪಿ, ಡಾ.ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಎಜುಕೇಷನ್ ಸೊಸೈಟಿ, ಭದ್ರಾವತಿ ತಾಲ್ಲೂಕಿನ ಎಲ್ಲಾ ಯೋಗ ಸಂಘ-ಸಂಸ್ಥೆಗಳು ಮತ್ತು ಎನ್‍ಎಸ್‍ಎಸ್, ಎನ್‍ಸಿಸಿ ಘಟಕಗಳು ಇವರ ಸಹಯೋಗದೊಂದಿಗೆ 8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರ ಬೆಳಿಗ್ಗೆ 6.45 ಕ್ಕೆ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಆವರಣ ಭದ್ರಾವತಿ ಇಲ್ಲಿ ಆಯೋಜಿಸಲಾಗಿದೆ.
ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ, ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವರಾದ ಡಾ.ಸುಧಾಕರ್.ಕೆ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಇವರ ಗೌರವ ಉಪಸ್ಥಿತಿ ಇರಲಿದೆ.
ಶಾಸಕರಾದ ಬಿ.ಕೆ.ಸಂಗಮೇಶ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷರು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಆಯುಷ್ ಇಲಾಖೆ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಆಯುಷ್ ಅಧಿಕಾರಿಗಳು, ವಿವಿಧ ಯೋಗ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.

ಇಕ್ಕೇರಿ/ ಶ್ರೀ ಅಘೋರೇಶ್ವರ ದೇವಸ್ಥಾನ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶಿವಮೊಗ್ಗ ಜೂ.19;
ಭಾರತ ಮತ್ತು ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಕಚೇರಿ, ಶಿವಮೊಗ್ಗ, ತಾಲ್ಲೂಕು ಪಂಚಾಯಿತಿ ಸಾಗರ ಇವರ ವತಿಯಿಂದ ಸಾಗರ ತಾಲ್ಲೂಕಿನ ಎಲ್ಲ ಯೋಗ ಸಂಘ ಸಂಸ್ಥೆಗಳು, ಎನ್‍ಎಸ್‍ಎಸ್ ಮತ್ತು ಎನ್‍ಸಿಸಿ ಘಟಕಗಳು ಇವರ ಸಹಯೋಗದೊಂದಿಗೆ 8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರ ಬೆಳಿಗ್ಗೆ 6.45 ಕ್ಕೆ ಶ್ರೀ ಅಘೋರೇಶ್ವರ ದೇವಸ್ಥಾನ ಆವರಣ ಇಕ್ಕೇರಿ ಇಲ್ಲಿ ಆಯೋಜಿಸಲಾಗಿದೆ.
ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ. ನಾರಾಯಣಗೌಡ, ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವರಾದ ಡಾ.ಸುಧಾಕರ್.ಕೆ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಇವರ ಗೌರವ ಉಪಸ್ಥಿತಿ ಇರಲಿದೆ.


ಶಾಸಕರು ಹಾಗೂ ಮೈಸೂರು ಸೇಲ್ಸ್ ಇಂಟರ್‍ನ್ಯಾಷನಲ್ ನಿಯಮಿತದ ಅಧ್ಯಕ್ಷರಾದ ಹೆಚ್.ಹರತಾಳು ಹಾಲಪ್ಪ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷರು, ಕಲ್ಮನೆ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಆಯುಷ್ ಇಲಾಖೆ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಅಧಿಕಾರಿಗಳು, ವಿವಿಧ ಯೋಗ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.

Exit mobile version