ರಾಜ್ಯದ ಪೋಲಿಸ್ ಇಲಾಖೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಗುಡ್ ನ್ಯೂಸ್ ನೀಡಿದ್ದು
ರಾಜ್ಯದ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವ ಪೋಲಿಸರಿಗೆ ವಸತಿ ಗೃಹಗಳನ್ನು ನಿರ್ಮಿಸಲು. 2000 ಕೋಟಿ ರೂಪಾಯಿ ವೆಚ್ಚದಲ್ಲಿ 10 ಸಾವಿರ ಗೃಹಗಳನ್ನು ನಿರ್ಮಿಸುವುದಾಗಿ. ಚಿಕ್ಕಮಗಳೂರಿನಲ್ಲಿ ತಿಳಿಸಿದ್ದಾರೆ.
ರಾಜ್ಯದ ಪೋಲಿಸ್ ಇಲಾಖೆಗೆ ಸರ್ಕಾರ ಸಾಕಷ್ಷು ಅನುದಾನ ಬಿಡುಗಡೆ ಮಾಡಿದ್ದು. ಈ ಹಿನ್ನೆಲೆಯಲ್ಲಿ ಸುಮಾರು 200 ಕೋಟಿ ರೂಪಾಯಿ ವೆಚ್ಚದಲ್ಲಿ 100 ಪೋಲಿಸ್ ಠಾಣೆ ಹಾಗೂ50 ಕೋಟಿರೂಪಾಯಿ ವೆಚ್ಚದಲ್ಲಿ ಅಗ್ನಿಶಾಮಕ ಠಾಣೆಗಳನ್ನು ನಿರ್ಮಿಸುವುದಾಗಿ ಹೇಳಿದ್ದಾರೆ.
ರಾಜ್ಯದ ಪೋಲಿಸ್ ಇಲಾಖೆಯನ್ನು ಅತ್ಯಾಧುನಿಕ ಗೊಳಿಸಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ