Site icon TUNGATARANGA

ಶಿವಮೊಗ್ಗ/ ಆರು ವರುಷದ ಬಾಲಕಿ ಮೇಲೆ ಅತ್ಯಾಚಾರಗೈದ ಆರೋಪಿಗೆ 20 ವರುಷ ಜೈಲು

ಶಿವಮೊಗ್ಗ, ಜೂ.23:
ಆರರ ಬಾಲೆಯ ಮೇಲೆ ಅತ್ಯಾಚಾರಗೈದ ಆರೋಪಿಗಿಂದು ಶಿವಮೊಗ್ಗ ಜಿಲ್ಲಾ ನ್ಯಾಯಾಲಯವಿಂದು ಇಪತ್ತು ವರುಷ ಜೈಲು ಹಾಗೂ ಐವತ್ತು ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಘಟನೆಯ ಸಮಗ್ರ ವಿವರ ಇಂತಿದೆ

ಕಳೆದ 10-02-2019 ರಂದು ಬೆಳಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿಯಾದ ಲಿಂಗರಾಜ @ ನವೀನ 18 ವರ್ಷ ಈತನು 06 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯು ತನ್ನ ಮನೆಯ ಮುಂದೆ ಆಟವಾಡುತ್ತಿದ್ದಾಗ, ಚಾಕಲೇಟ್ ಕೊಡುತ್ತೇನೆಂದು ಕರೆದುಕೊಂಡು ಹೋಗಿ ಆಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದುನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.
ಆಗಿನ ತನಿಖಾಧಿಕಾರಿಗಳಾದ ಯೋಗೇಶ್, ಸಿಪಿಐ ಭದ್ರಾವತಿ ಗ್ರಾಮಾಂತರ ವೃತ್ತ ರವರು ಸದರಿ ಪ್ರಕರಣದ ತನಿಖೆಯನ್ನು ಕೈಗೊಂಡು ಆರೋಪಿ ಲಿಂಗರಾಜ @ ನವೀನ 18 ವರ್ಷ ಈತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.


ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, ಮಾನ್ಯ Addl District and Sessions Judge, FTSC–II (POCSO) Shivamogga* ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಾಧೀಶರಾದ ಮೋಹನ ಜೆ.ಎಸ್ ರವರು ಇಂದು ಆರೋಪಿತನ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳ ಕಾಲ ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ.

Exit mobile version