Site icon TUNGATARANGA

shimoga/ಕಾರ್ಮಿಕರು ದೇಶದ ಅಭಿವೃ ದ್ಧಿಯ ಬೆನ್ನೆಲುಬು: ಕಾರ್ಮಿಕ ಸಚಿವ ಅರಬೈಲು ಶಿವರಾಮ್ ಹೆಬ್ಬಾರ್!…

ಶಿವಮೊಗ್ಗ, ಜೂ.೨೮:
ಕಾರ್ಮಿಕರು ರಾಜ್ಯದ, ದೇಶದ ಅಭಿವೃ ದ್ಧಿಯ ಬೆನ್ನೆಲುಬು. ಕಾರ್ಮಿಕರಿಲ್ಲದೆ ಯಾವುದೇ ಅಭಿವೃದ್ಧಿಯನ್ನು ಊಹಿಸು ವುದೂ ಕಷ್ಟ. ಇಂತಹ ಅಭಿವೃದ್ಧಿಯ ಬೆನ್ನೆಲುಬಾಗಿರುವ ಕಾರ್ಮಿಕರ ಆರೋಗ್ಯದ ಕಾಳಜಿ ರಾಜ್ಯ ಸರ್ಕಾರದ ಆಧ್ಯತೆಯ ವಿಷಯವಾಗಿದೆ ಎಂದು ರಾಜ್ಯ ಕಾರ್ಮಿಕ ಸಚಿವ ಅರಬೈಲು ಶಿವರಾಮ್ ಹೆಬ್ಬಾರ್
ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆ ಯನ್ನು ಜಾರಿಗೊಳಿಸಿದ್ದು, ಈ ಎರಡು ಯೋಜನೆಗಳಿಗೆ ಇಂದು ಚಾಲನೆ ನೀಡಿ ಮಾತನಾಡಿದರು.


ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆಂ iನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.


ನಂತರ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಸಿದ್ಲೀಪುರದಲ್ಲಿ ಕಾರ್ಮಿಕರಿಗೆ ವಸತಿ ಸಮುಚ್ಛಯ ಕಾಮಗಾ ರಿಯ ಗುದ್ದಲಿ ಪೂಜೆ ಮತ್ತು ಶಂಕುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾ ಡಿದ ಸಚಿವರು, ಸಿದ್ಲೀಪುರ ಗ್ರಾಮದಲ್ಲಿ ೧೦ ಎಕರೆ ಜಾಗದಲ್ಲಿ ೧೦ಕೋಟಿ ರೂ.ಗಳ ವೆಚ್ಚದಲ್ಲಿ ೫೦೦ಮಂದಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಅಗತ್ಯ

ಮೂಲ ಭೂತ ಸೌಕರ್ಯಗಳನ್ನೊಳಗೊಂಡ ವಸತಿ ಸಮುಚ್ಛಯವನ್ನು ನಿರ್ಮಿಸಲು ಉದ್ದೇಶಿಸ ಲಾಗಿದ್ದು, ಹೆಚ್ಚುವರಿ ೫೦೦ ಮಂದಿ ಕಾರ್ಮಿಕರು ಉಳಿದುಕೊಳ್ಳಲು ಅನುಕೂಲ ವಾಗುವಂತೆ ಕಟ್ಟಡ ನಿರ್ಮಿಸಲು ಅಗತ್ಯವಿ ರುವ ಅನುದಾನವನ್ನು ಮಂಜೂರು ಮಾಡಲಾಗುವುದು ಎಂದರು.


ಜಿಲ್ಲೆಯಲ್ಲಿ ಇರುವ ಒಟ್ಟು ಕಾರ್ಮಿಕ ಕುಟುಂಬಗಳಲ್ಲಿ ಮೊದಲ ಹಂತದಲ್ಲಿ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನ ೩೦೦೦೦ ಕುಟುಂಬಗಳ ಸದಸ್ಯರಿಗೆ ೨೦ ರೀತಿ ಯ ಕಾಯಿಲೆಗಳಿಗೆ ಸಂಬಂಧಿಸಿದಂತೆ
ಉಚಿತ ಆರೋಗ್ಯ ತಪಾಸಣೆ ಮಾಡಿಸಲಾಗುತ್ತಿದೆ. ಅದಕ್ಕಾಗಿ ಪ್ರತಿ ವ್ಯಕ್ತಿಗೆ ೧೧೬೦೦/-ರೂ.ಗಳಂತೆ ಹಣ ಖರ್ಚು ಮಾಡಲಾಗುತ್ತಿದೆ. ಮುಂದಿನ ಕೆಲವೇ ದಿನಗಳಲ್ಲಿ ೩೦೦೦೦ ಮಂದಿಯ ಆರೋಗ್ಯ ತಪಾಸಣೆಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುವುದು ಎಂದರು.


ಕಾರ್ಮಿಕರ ಮಕ್ಕಳಲ್ಲೂ ಎಲ್ಲಾ ರೀತಿಯ ಅರ್ಹತೆ ಇದ್ದು ಅವರಿಗೂ ಸಮಾಜದಲ್ಲಿ ಗುರುತಿಸುವ ಹಾಗೂ ಸ್ವಾಭಿಮಾನದಿಂದ ಜೀವಿಸುವ ಅವಕಾಶ ಒದಗಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಕಾರ್ಮಿಕರ ಅರ್ಹ ಮತ್ತು ಆಸಕ್ತ ಮಕ್ಕಳನ್ನು ಪೈಲಟ್ ಆಗಿಸುವ ನಿಟ್ಟಿನಲ್ಲಿ ೧೮ತಿಂಗಳ ತರಬೇತಿಯನ್ನು ಆಯೋಜಿಸಲಾಗಿದೆ. ಐ.ಎ.ಎಸ್ ಮತ್ತು ಕೆ.ಎ.ಎಸ್ ತರಬೇತಿಯೊಂದಿಗೆ ಶಿಷ್ಯವೇತನ ನೀಡಿ ಪ್ರೋತ್ಸಾಹಿಸುತ್ತಿರುವುದು ದೇಶದಲ್ಲೇ ಮೊದಲು ಎಂದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ರಾಜ್ಯದ ಅಸಂಘಟಿತ ಕಾರ್ಮಿಕರು, ಉದ್ಯೋಗ ಅರಸಿ ಊರಿಂದೂರಿಗೆ ತೆರಳುವ ಕಾರ್ಮಿಕರನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸುವ ಹಾಗೂ ಸರ್ಕಾರಿ ಸೇವಾಸೌಲಭ್ಯಗಳಿಗಾಗಿ ಇ-ಶ್ರಮ್ ಕಾರ್ಡನ್ನು ವಿತರಿಸಲಾಗುತ್ತಿದೆ ಎಂದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ ಅವರು ಮಾತನಾಡಿ, ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಗುತ್ತಿಗೆ ಪಡೆದ ಗುತ್ತಿಗೆದಾರರು ಸಕಾಲದಲ್ಲಿ ಗುಣಮಟ್ಟದ ಕಾಮಗಾರಿ ಮಾಡಿ ಹಸ್ತಾಂತರಿಸುವಂತೆ ಸೂಚಿಸಿದರು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ.ಅಶೋಕನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯರಾದ ರುದ್ರೇಗೌಡರು, ಡಿ.ಎಸ್.ಅರುಣ್, ಮೇಯರ್ ಸುನಿತಾ ಅಣ್ಣಪ್ಪ, ಎಸ್.ದತ್ತಾತ್ರಿ, ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಸಿ.ಇ.ಒ. ಎಂ.ಎಲ್.ವೈಶಾಲಿ, ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿ ಲಕ್ಷ್ಮಿ ಪ್ರಸಾದ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸತೀಶ್ ಮುಂತಾದವರು ಉಪಸ್ಥಿತರಿದ್ದರು

Exit mobile version