ಶಿವಮೊಗ್ಗ,
ಶಿವಮೊಗ್ಗ ಸೂಕ್ಷ್ಮಜಿಲ್ಲೆಯಾಗಿರುವ ಕಾರಣ ಸೋಷಿಯಲ್ ಮೀಡಿಯಾಗಳ ಮೇಲೆ ಕಣ್ಣಾವಲಿಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ಶುಕ್ರವಾರ ಪೊಲೀಸ್ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾ ಣಗಳಲ್ಲಿನ ವಿಷಯಗಳು ಹೆಚ್ಚು ಪ್ರಭಾವ ಬೀರುತ್ತಿವೆ. ಕೋಮುಸೌಹಾರ್ದ ಕಾಪಾಡುವ ಉದ್ದೇಶದಿಂದ ಅವುಗಳಮೇಲೆ ತೀವ್ರ ನಿಗಾ ವಹಿಸಲಾಗುತ್ತಿದೆ ಎಂದರು.
ಪರಪ್ಪನ ಅಗ್ರಹಾರದಲ್ಲಿ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ನಮ್ಮ ಗಮನಕ್ಕೆ ಬಂದಾಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ. ಬಂಧಿಖಾನೆಗಳ ಮೇಲೆ ನಿಗಾ ಇಡಲು ಸೂಚನೆ ನೀಡಿದ್ದೇವೆ ಎಂದರು.
ಹೊಟೇಲ್‌ಗಳಲ್ಲಿ ಭದ್ರತೆ ವ್ಯವಸ್ಥೆ ಅಳವ ಡಿಸಲು ಸೂಚನೆ ನೀಡಲಾಗಿದೆ. ಬಹುತೇಕ ಐಷಾರಾಮಿ ಹೋಟೆಲ್, ಮಾಲ್ ಗಳಲ್ಲಿ ತರಬೇತಿ ಇರುವ ಭದ್ರತಾ ಸಿಬ್ಬಂದಿ ಇಲ್ಲ. ಸಿಸಿಟಿವಿ ಕ್ಯಾಮೆರಾ ಕೂಡ ಸಮರ್ಪಕವಿಲ್ಲ. ಪಾಲಿಕೆ ವ್ಯಾಪ್ತಿಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಎಲ್ಲ ಹೋಟೆಲ್, ಮಾಲ್ ಗಳು ಕೇಂದ್ರೀಯ ಪಬ್ಲಿಕ್ ಸೆಕ್ಟರ್ ಕಾಯ್ದೆ ಪಾಲಿಸಬೇಕು ಎಂದು ಸೂಚನೆ ನೀಡಿದರು.
ಕೋಮುಗಲಭೆ ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸದಾ ಕೆಲಸ ಮಾಡು ತ್ತಿದೆ. ಅದಕ್ಕಾಗಿ ವಲಯಗಳನ್ನು ಗುರುತಿಸಲಾ ಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಮದ್ಯಪಾನ ಮಾಡುವುದು ನಿಷಿದ್ಧವಾಗಿದ್ದು, ಕಡ್ಡಾಯವಾಗಿ ಪಾಲನೆ ಮಾಡಬೇಕು. ವಾಹನ ಅಥವಾ ಕೈಯಲ್ಲಿ ಮಾರಕಾಸ್ತ್ರ ಹಿಡಿದು ಸುತ್ತಾಡುವಂತಿಲ್ಲ. ಅಂತಹ ಪ್ರಕರಣ ಕಂಡು ಬಂದರೆ ವಶಕ್ಕೆ ಪಡೆದು ತಕ್ಷಣವೇ ಕೇಸ್ ದಾಖಲಿಸಲಾಗುವುದು ಎಂದರು.
ಐಜಿಪಿ ಕೆ.ತ್ಯಾಗರಾ ಜನ್, ಎಸ್ಪಿ ಬಿ.ಎಂ.ಲಕ್ಷ್ಮಿ ಪ್ರಸಾದ್, ಎಎಸ್ಪಿ ವಿಕ್ರಂ ಇದ್ದರು.
ಸಣ್ಣ ಘಟನೆಯನ್ನೂ ನಿರ್ಲಕ್ಷಿಸುವಂತಿಲ್ಲ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಎಫ್‌ಐಆರ್ ದಾಖಲಿಸಿ, ಯಾವುದೇ ಕೇಸ್‌ಗಳ ಬಗ್ಗೆ ತಾರತಮ್ಯ ಮಾಡದಂತೆ ಎಚ್ಚರಿಕೆ ವಹಿಸಿ ಎಂದು ನಿರ್ದೇಶನ ನೀಡಲಾಗಿದೆ. ಯುವ ಸಮೂಹ ಹೆಚ್ಚಾಗಿ ಕಾನೂನು ಉಲ್ಲಂಘಿಸುತ್ತಿದ್ದು ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಸರ್ಕಾರಿ ಸೌಲಭ್ಯ ಕಳೆದುಕೊಳ್ಳುವ ಬಗ್ಗೆ ಶಾಲಾ-ಕಾಲೇಜುಗಳಲ್ಲಿ ಅರಿವು ಮೂಡಿಸುವಂತೆ ಸಲಹೆ ನೀಡಿದ್ದೇನೆ.
-ಅಲೋಕ್‌ಕುಮಾರ್, ಎಡಿಜಿಪಿ