ಶಿವಮೊಗ್ಗಜು.20 :
ಶಿವಮೊಗ್ಗದ ರೌಡಿ ಹಂದಿ ಅಣ್ಣಿ ಅಲಿಯಾಸ್ ಅಣ್ಣಪ್ಪನ ಕೊಲೆ ಮಾಡಿ ನಿನ್ನೆ ತಡರಾತ್ರಿ ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿಗಳ ಎದುರು ಶರಣಾಗಿದ್ದ 8 ಆರೋಪಿಗಳನ್ನು ಇಂದು ರಾತ್ರಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆ ತರಲಾಗಿದೆ.
ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ತೆರಳಿದ್ದ ಪೊಲೀಸರ ತಂಡ ಆರೋಪಿಗಳಾದ ಕಾರ್ತಿಕ್, ನಿತಿನ್, ಮಧುಸೂಧನ್, ಫಾರುಖ್, ಆಂಜನೇಯ, ಮದನ್, ಮಧು, ಚಂದನ್ ಅವರುಗಳನ್ನು ಹೆಚ್ಚುವರಿ ತನಿಖೆಗಾಗಿ ಕರೆ ತರಲಾಗಿದೆ.
ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಕಾನೂನು ರೀತಿಯ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನಾಳೆ ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.
ಜಯನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ನಡೆಯಲಿದೆ.