ಶಿವಮೊಗ್ಗ
ಮಳೆಯಿಂದಾಗಿ22 ಮನೆಗಳಿಗೆ ಹಾನಿಯಾಗಿದ್ದು, 8 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, ರಾಜ್ಯ ಸರ್ಕಾರದಿಂದ 5 ಲಕ ರೂ. ಪರಿಹಾರ ನೀಡಲಾಗುವುದು ಎಂದು ಮಾಜಿ ಸಚಿವ, ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಮಳೆಯಿಂದಾಗಿ ಹಾನಿಗೊಳಗಾದ ನಗರದ ವಿವಿಧ ಬಡಾವಣೆಗಳ ಮನೆಗಳಿಗೆ ಭೇಟಿ ನೀಡಿದ ನಂತರ ಅವರು ಮಾತನಾಡಿದರು.
ಶಾಂತಿ ನಗರ, ಬಾಪೂಜಿ ನಗರ, ಶೇಷಾದ್ರಿಪುರಂ ಸೇರಿ ವಿವಿಧ ಬಡಾವಣೆಗಳಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ತೆರಳಿ ಅವರು ಪರಿಶೀಲನೆ ನಡೆಸಿದರು. ಮನೆ ಕಳೆದುಕೊಂಡು ಸಂಕಷ್ಟಕ್ಕೀಡಾದವರಿಗೆ ಸಾಂತ್ವನ ಹೇಳಿ, ಆದಷ್ಟು ಬೇಗ ಪರಿಹಾರ ಒದಗಿಸುವ ಭರವಸೆ ನೀಡಿದರು.
ಮೇಯರ್ ಸುನಿತಾ ಅಣ್ಣಪ್ಪ, ಪಾಲಿಕೆ ಸದಸ್ಯರಾದ ಎಸ್.ಎನ್. ಚನ್ನಬಸಪ್ಪ, ಸುರೇಖಾ ಮುರಳೀಧರ್ ಮತ್ತಿತರರಿದ್ದರು.