Site icon TUNGATARANGA

ಪ್ರೀತಿ, ಸಂಬಂಧ ವಿಶ್ವಾಸ ಶಾಶ್ವತವಾಗಿರಬೇಕು.ಮುಖ್ಯವೇ ಹೊರತು ಅಧಿಕಾರವಲ್ಲ : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ

ಪ್ರೀತಿ, ಸಂಬಂಧ ಮತ್ತು ವಿಶ್ವಾಸ ಶಾಶ್ವತವಾಗಿರಬೇಕು. ಅದು ಮುಖ್ಯವೇ ಹೊರತು ಅಧಿಕಾರವಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.


ಅವರು ಇಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಸಹ್ಯಾದ್ರಿ ಸಂಘ, ಷಡಾಕ್ಷರಿ ಅಭಿಮಾನಿ ಬಳಗ, ಹಿತೈಷಿಗಳು ಹಾಗೂ ವಿವಿಧ ಸಂಘಟನೆಗಳು ಹಮ್ಮಿಕೊಂಡಿದ್ದ ಅವರ ೪೩ ನೇ ಹುಟ್ಟುಹಬ್ಬದ ಆಚರಣೆ ವೇಳೆ ಮಾತನಾಡಿದರು.


ನಾನು ಬೆಂಗಳೂರಿನಲ್ಲಿ ಸರ್ಕಾರಿ ನೌಕರರು ಅದ್ಧೂರಿಯಾಗಿ ಹುಟ್ಟುಹಬ್ಬವನ್ನು ಹಮ್ಮಿಕೊಂಡಿದ್ದು, ಅಲ್ಲಿ ಭಾಗವಹಿಸಬೇಕಿತ್ತು. ಆದರೆ, ಶಿವಮೊಗ್ಗ ನನ್ನ ಶಕ್ತಿ ಕೇಂದ್ರ. ಸ್ನೇಹಿತರ ಒತ್ತಡಕ್ಕೆ ಮಣಿದು ಇಲ್ಲಿ ಭಾಗವಹಿಸಿದ್ದೇನೆ. ನನ್ನ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ನಾನು ಚಿರಋಣಿಯಾಗಿದ್ದೇನೆ. ನನ್ನ ಎಲ್ಲಾ ಯಶಸ್ಸಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ ಅವರು ಪ್ರೇರಣೆಯಾಗಿದ್ದಾರೆ ಎಂದರು.


ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್ ಮಾತನಾಡಿದರು. ಈ ಸಂದರ್ಭದಲ್ಲಿ ವೀರಶೈವ ಸಮಾಜದ ಎನ್.ಜೆ. ರಾಜಶೇಖರ್, ಟಿ.ಬಿ. ಜಗದೀಶ್ ಉಮೇಶ್, ಪಾಲಿಕೆ ಸದಸ್ಯ ವಿಶ್ವನಾಥ್, ಅಶ್ವತ್ಥನಾರಾಯಣ ಶೆಟ್ಟಿ, ದಿವಾಕರ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳಿ, ಉಪ ವಿಭಾಗಾಧಿಕಾರಿ ಎಸ್.ಬಿ. ದೊಡ್ಡಗೌಡರ್ ಇತರರಿದ್ದರು.

Exit mobile version