Site icon TUNGATARANGA

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬವನ್ನು ದಾವಣಗೆರೆ ಯಲ್ಲಿ ‘ಸಿದ್ಧರಾಮಯ್ಯ 75 ಅಮೃತ ಮಹೋತ್ಸವ’ ಹೆಸರಲ್ಲಿ ಆಯೋಜಿಸಲಾಗಿದೆ:ಮಾಜಿ ಸಚಿವ ಹೆಚ್. ಆಂಜನೇಯ

ಶಿವಮೊಗ್ಗ,
ಸಾಮಾಜಿಕ ನ್ಯಾಯದ ಹರಿಕಾರ, ಜನಾಕರ್ಷಕ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬವನ್ನು ಆ.3 ರಂದು ದಾವಣಗೆರೆ ಯಲ್ಲಿ ‘ಸಿದ್ಧರಾಮಯ್ಯ 75 ಅಮೃತ ಮಹೋತ್ಸವ’ ಹೆಸರಲ್ಲಿ ಆಯೋಜಿಸಲಾಗಿದೆ. ಈ ಬೃಹತ್ ಸಮಾರಂಭಕ್ಕೆ ಶಿವಮೊಗ್ಗ ಜಿಲ್ಲೆಯಿಂದಲೂ ಸಾವಿರಾರು ಜನ ಆಗಮಿಸಲಿದ್ದಾರೆ ಎಂದು ಅಮೃತ ಮಹೋತ್ಸವ ಸಮಿತಿ ಶಿವಮೊಗ್ಗ ಜಿಲ್ಲಾ ವೀಕ್ಷಕ ಹಾಗೂ ಮಾಜಿ ಸಚಿವ ಹೆಚ್. ಆಂಜನೇಯ ಹೇಳಿದರು.


ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಸಮಾರಂಭಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಂದೀಪ್ ಸುರ್ಜೇವಾಲಾ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲಾದವರು ಭಾಗವಹಿಸಿಲಿದ್ದಾರೆ ಎಂದರು.


ಇದೊಂದು ಅಪೂರ್ವ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಿಂದ ರಾಜಕೀಯ ಪಕ್ಷಗಳು ಬೆದರಿ ಹೋಗಿವೆ. ಶಕ್ತಿ ಪ್ರದರ್ಶನವಾಗುತ್ತದೆ. ಭಾರೀ ಜನ ಸೇರುತ್ತಾರೆ. ಏನು ಮಾಡುವುದು ಎಂಬ ಭಯದಲ್ಲಿ ಬಿಜೆಪಿ ಇದೆ. ಅದಕ್ಕಾಗಿಯೇ ಇಂತಹ ಕಾರ್ಯಕ್ರಮ ವನ್ನು ಬಿಜೆಪಿಯವರು ವಿರೋಧಿಸುತ್ತಿದ್ದಾರೆ ಎಂದರು.


ಸಿದ್ಧರಾಮಯ್ಯ ಸಾಮಾಜಿಕ ನ್ಯಾಯದ ಹರಿಕಾರರು. ಶೋಷಿತರ ಪರವಾಗಿ ಕೆಲಸ ಮಾಡಿದವರು. ಅನ್ನಭಾಗ್ಯ ನೀಡಿದವರು, ಇಂತಹ ವ್ಯಕ್ತಿಯ ಬಗ್ಗೆ ಅಭಿಮಾನವಿಟ್ಟು ಕಾಂಗ್ರೆಸ್ ಕಾರ್ಯಕರ್ತರು, ಜನಪ್ರತಿನಿಧಿಗಳು, ಬೆಂಬಲಿಗರು ಸೇರಿ ಈ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದರು.


ಬಿಜೆಪಿ ಸರ್ಕಾರ ಬಡವರ ಬದುಕನ್ನು ಕಸಿದುಕೊಂ ಡಿದೆ. ಜನ ವಿರೋಧಿ ಆಡಳಿತ ನೀಡುತ್ತಿದೆ. ಜಿ.ಎಸ್.ಟಿ. ಮೂಲಕ ತಿನ್ನುವ ಅನ್ನಕ್ಕೂ ಕಲ್ಲು ಹಾಕಿದ್ದಾರೆ. ಬಂಡವಾ ಳಶಾಹಿಗಳ ಪರವಾಗಿದ್ದಾರೆ. ಮೋದಿ ಹೇಳಿದ ಅಚ್ಛೇ ದಿನ್ ಬಡವರಿಗೆ ಇನ್ನೂ ಬಂದಿಲ್ಲ. ಬೆಲೆ ನಿಯಂತ್ರಣ ದಲ್ಲಿಲ್ಲ. ಇಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್, ವೀಕ್ಷಕ ಷಡಾಕ್ಷರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಪ್ರಮುಖರಾದ ಆರ್. ಪ್ರಸನ್ನಕುಮಾರ್, ಕೆ.ಬಿ. ಪ್ರಸನ್ನಕುಮಾರ್, ಶಾಂತವೀರ ಪ್ಪಗೌಡ, ಬಲ್ಕೀಷ್ ಬಾನು, ಅನಿತಾ ಕುಮಾರಿ, ಪಲ್ಲವಿ, ಬಲದೇವ ಕೃಷ್ಣ, ರಾಜನಂದಿನಿ, ಚಂದ್ರಭೂಪಾಲ್, ಶ್ರೀನಿವಾಸ್ ಕರಿಯಣ್ಣ, ಎನ್ ಇತರರಿದ್ದರು.

Exit mobile version