Site icon TUNGATARANGA

ತೀರ್ಥಹಳ್ಳಿಯಲ್ಲಿ ನಡೆಯುವ ಬೃಹತ್ ಪಾದಯಾತ್ರೆಗೆ ಕಾರ್ಯಕರ್ತರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ:ಆರ್.ಎಂ. ಮಂಜುನಾಥಗೌಡ ಮನವಿ

ಶಿವಮೊಗ್ಗ,
ಸ್ವಾತಂತ್ರ್ಯ ಅಮೃತ ಮಹೋತ್ಸವದ ನೆನಪಿಗಾಗಿ ತೀರ್ಥಹಳ್ಳಿಯಲ್ಲಿ ನಡೆಯುವ ಬೃಹತ್ ಪಾದಯಾತ್ರೆಗೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾಗೃತಿ ಸಮಾವೇಶಕ್ಕೆ ಮೆರಗು ನೀಡಬೇಕು ಎಂದು ಕೆಪಿಸಿಸಿ ಸಹಕಾರಿ ವಿಭಾಗದ ಸಂಚಾಲಕ ಆರ್.ಎಂ. ಮಂಜುನಾಥಗೌಡ ಮನವಿ ಮಾಡಿದರು.


ಅವರು ಇಂದು ಗಾಜನೂರಿನಲ್ಲಿ ನಡೆದ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸಮಾಜಕ್ಕಾಗಿ ಹೋರಾಡಿದವರ ನೆನಪು ಮಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ. ಮುಖ್ಯವಾಗಿ ಯುವ ಪೀಳಿಗೆಗೆ ಇದನ್ನು ನೆನಪಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಜು. ೨೮ ರಂದು ಬೆಳಗ್ಗೆ ೮ ಗಂಟೆಗೆ ಹಾರೋಗುಳಿಗೆ ಗ್ರಾಮದ ಕಡಿದಾಳ್ ಮಂಜಪ್ಪನವರ ಸಮಾಧಿ ಸ್ಥಳದಿಂದ ತೀರ್ಥಹಳ್ಳಿ ತಾಲೂಕು ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದರು.


ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಸಹಕಾರಿ ವಿಭಾಗದ ಅಧ್ಯಕ್ಷ ಜಗದೀಶ್ ಗೌಡ, ಪ್ರಮುಖರಾದ ರಾಘವೇಂದ್ರ, ನೂರ್ ಅಹಮ್ಮದ್, ಶಿವಕುಮಾರ್, ಮಲ್ಲಿಕಾರ್ಜುನ್, ಅಕ್ರಂ, ಸಲೀಂ ಖಾನ್ ಮುಂತಾದವರಿದ್ದರು.

Exit mobile version