Site icon TUNGATARANGA

ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಬಿ.ಸಿದ್ಧಬಸಪ್ಪ ಆಯ್ಕೆ : ಸಿ.ಎಸ್.ಷಡಾಕ್ಷರಿ ಅಭಿನಂದನೆ

: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಬಿ.ಸಿದ್ಧಬಸಪ್ಪ ಅವರು ಇಂದು ಬೆಂಗಳೂರಿನಲ್ಲಿ ನಡೆದ ಚುನಾವಣೆಯಲ್ಲಿ ಜಯಶಾಲಿಯಾದರು.


ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ಮಾರ್ಗದರ್ಶನದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಬಿ.ಸಿದ್ಧಬಸಪ್ಪ ಅವರು ಮಾತನಾಡಿ, ಪ್ರೌಢಶಾಲಾ ಶಿಕ್ಷಕ ಸಮುದಾಯದ ಹಾಗೂ ಸಂಘದ ಪ್ರಮುಖ ಬೇಡಿಕೆ ಮತ್ತು ಸಮಸ್ಯೆಗಳ ಈಡೇರಿಕೆಗಾಗಿ ರೂಪು-ರೇಷೆಗಳನ್ನು ಸಿದ್ಧಪಡಿಸಿ ಸಮಸ್ಯೆಗಳ ನಿವಾರಣೆಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಕ್ರಿಯಾಶೀಲ ರಾಜ್ಯಾಧ್ಯಕ್ಷರಾಗಿ ಸಿ.ಎಸ್.ಷಡಾಕ್ಷರಿ ಅವರ ಸಲಹೆ-ಸಹಕಾರ ಪಡೆದು, ಅವಿರತವಾಗಿ ಶ್ರಮಿಸುವ ಮೂಲಕ ಶಿಕ್ಷಕರ ಹಿತ ಕಾಪಾಡುವುದಾಗಿ ಅವರು ತಿಳಿಸಿದರು

.
ಸಂಘದ ಪ್ರಮುಖ ಬೇಡಿಕೆಗಳಾಗಿರುವ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರದ ಶಿಕ್ಷಕರಿಗೂ ವೇತನ ಪರಿಷ್ಕರಣೆ, ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಜಾರಿಗೆ ತರುವುದು, ಆಗಸ್ಟ್ ೨೦೦೮ರ ನಂತರದಲ್ಲಿ ನೇಮಕಗೊಂಡ ಶಿಕ್ಷಕರ ವೇತನ ತಾರತಮ್ಯ ನಿವಾರಣೆ ಹಾಗೂ ಬಡ್ತಿ ಪ್ರೌಢಶಾಲಾ ಶಿಕ್ಷಕರ ಕಾಲಮಿತಿ ವೇತನ ಬಡ್ತಿ ಸೇರಿದಂತೆ ಅನೇಕ ಜ್ವಲಂತ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಸಂಘರ್ಷಕ್ಕೆ ಅವಕಾಶವಿಲ್ಲದಂತೆ ಸಮಸ್ಯೆಗಳನ್ನು ಇತ್ಯರ್ಥಪಡಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಅವರು ತಿಳಿಸಿದ್ದಾರೆ.


ಪ್ರೌಢಶಾಲಾ ಸಹಶಿಕ್ಷಕರ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಇಂದು ಆಯ್ಕೆಯಾಗಿರುವ ಬಿ.ಸಿದ್ಧಬಸಪ್ಪ ಅವರಿಗೆ ಹಾಗೂ ಪದಾಧಿಕಾರಿಗಳಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version