ಶಿವಮೊಗ್ಗ,
ಬಾಲ್ಯ ವಿವಾಹ ಮಾಡುವ ಕಲ್ಯಾಣ ಮಂದಿರ, ದೇವಸ್ಥಾನ, ಮದುವೆ ಮಾಡಿಸುವ ಪೂಜಾರಿಗಳು, ಆಮಂತ್ರಣ ಮುದ್ರಿಸುವ ಪ್ರಿಂಟರ್ ಸೇರಿದಂತೆ ಬಾಲ್ಯವಿವಾಹಕ್ಕೆ ಸಹಕರಿಸುವವರೆಲ್ಲರ ವಿರುದ್ದ ಪ್ರಕರಣ ದಾಖಲು ಮಾಡಬೇಕೆಂದು ಎಂದು ಜಿಲ್ಲಾಧಿ ಕಾರಿ ಡಾ.ಆರ್.ಸೆಲ್ವಮಣಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬಾಲ್ಯವಿಹಾಹ ತಡೆಗಟ್ಟಲು ಅನೇಕ ರೀತಿಯಲ್ಲಿ ಅರಿವು ಮೂಡಿಸಲಾಗುತ್ತಿ ದ್ದರೂ,
ಬಾಲ್ಯವಿವಾಹಗಳು ನಡೆಯುತ್ತಲೇ ಇವೆ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಹಾಗೂ ಮಕ್ಕಳ ಕಲ್ಯಾಣ ಸಮಿತಿಯವರು ಇಂತಹ ಮದುವೆಗೆ ಸಹಕರಿಸಿದವರೆಲ್ಲರ ವಿರುದ್ದ ಪ್ರಕರಣ ದಾಖಲಿಸಬೇಕೆಂದು ಸೂಚನೆ ನೀಡಿದರು.
ಬಾಲ್ಯವಿವಾಹವನ್ನು ತಗ್ಗಿಸಲು ಡಿಡಿಪಿಯು ಮತ್ತು ಡಿಡಿಪಿಐ ರವರು ಶಾಲಾ-ಕಾಲೇಜು ಮುಖ್ಯೋಪ್ಯಾಧ್ಯಾಯರನ್ನು ಕರೆ ಯಿಸಿ, ಮಕ್ಕಳ ಕಲ್ಯಾಣ ಸಮಿತಿ ಸಹಯೋಗ ದಲ್ಲಿ ಸಭೆ ನಡೆಸಿ, ಮಕ್ಕಳ ಕುರಿತು ಹೆಚ್ಚಿನ ನಿಗಾ ವಹಿಸುವ ಬಗ್ಗೆ ಹಾಗೂ ಬಾಲ್ಯ ವಿವಾ ಹದ ದುಷ್ಪರಿಣಾಮಗಳ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಬಗ್ಗೆ ಕ್ರಮ ವಹಿಸಲು ಸೂಚಿಸಿದ ಅವರು ಪಿಯುಸಿ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.
ದತ್ತು ಕೇಂದ್ರಕ್ಕೆ ಅಗತ್ಯವಾದ ಸಿಬ್ಬಂದಿ ಯನ್ನು ಕೂಡಲೇ ನಿಯೋಜಿಸಲು ಕ್ರಮ ವಹಿಸಿ, ಆಗಸ್ಟ್ ೧೫ ರೊಳಗೆ ಕೇಂದ್ರವನ್ನು ಆರಂಭಿಸಬೇಕು. ಬಾಲಕಿಯರ ಬಾಲ ಮಂದಿ ರದ ಸ್ಥಿತಿ ಉತ್ತಮವಾಗಿಲ್ಲ. ಸೂಕ್ತವಾದ ಕಟ್ಟಡ ವನ್ನು ಹುಡುಕಿ ಸುಧಾರಣೆಗೆ ಕ್ರಮ ವಹಿಸ ಬೇಕು. ವಿಶೇಷ ಪಾಲನಾ ಯೋಜನೆ, ಪೋಷ ಕತ್ವ ಕಾರ್ಯಕ್ರಮಗಳನ್ನು ಪರಿಣಾಮಕಾರಿ ಯಾಗಿ ಜಾರಿಗೊಳಿಸಬೇಕು. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಮತ್ತು ಬಾಲನ್ಯಾಯ ಮಂಡಳಿ ಮುಂದೆ ಬಂದ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿ, ಪುನರ್ವಸತಿಗೆ ಒತ್ತು ನೀಡಬೇಕು ಎಂದರು.
ಸಭೆಯಲ್ಲಿ ಜಿ.ಪಂ. ಸಿಇಓ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಡಿಹೆಚ್‌ಓ ಡಾ. ರಾಜೇಶ್ ಸುರಗಿಹಳ್ಳಿ ಇದ್ದರು.