Site icon TUNGATARANGA

ನಿಷೇಧಾಜ್ಞೆ ಹಿನ್ನೆಲೆ‌/ ಶಿವಮೊಗ್ಗ, ಭದ್ರಾವತಿ ನಗರ ಶಾಲಾ ಕಾಜೇಜಿಗೆ ರಜೆ/ ಕುವೆಂಪು ವಿವಿ ವಿದ್ಯಾರ್ಥಿಗಳಿಗೆ ನಾಳೆ ರಜೆ, ಹಳ್ಳಿ ಶಾಲೆ ಕಥೆ ಏನು?

ಶಿವಮೊಗ್ಗ, ಆ. 15:
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ ನಾರಾಯಣ ಗೌಡ ಅವರು ಚಾಕು ಇರಿತಕ್ಕೆ ಒಳಗಾಗಿದ್ದ ಪ್ರೇಮ್ ಸಿಂಗ್ ಆರೋಗ್ಯ ವಿಚಾರಿಸಿದ್ದಾರೆ. ನಂತರ ಮಾಧ್ಯಮಗಳಿಗೆ ಮಾತನಾಡಿದ ಉಸ್ತುವಾರಿ ಸಚಿವರು ಅಹಿತಕರ ಘಟನೆ ಹಿನ್ನಲೆಯಲ್ಲಿ ನಾಳೆ ಶಾಲೆಗೆ ರಜೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, 144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ದಿನಾಂಕ 16/08/2022 ರಂದು ರಜೆ ಯನ್ನು ಜಿಲ್ಲಾಧಿಕಾರಿ ಘೋಷಣೆ ಮಾಡಿದ್ದಾರೆ.
ವಿವಿ ರಜೆ:
ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೂಡ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ರಜೆ ಘೋಷಿಸಿದ್ದಾರೆ.


ವಿಶ್ವವಿದ್ಯಾಲಯಕ್ಕೆ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಿಂದ ಪ್ರತಿ ದಿನ ಪ್ರಯಾಣಿಸುವ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ರಜೆ ಘೋಷಿಸಲಾಗಿದ್ದು, ಉಪನ್ಯಾಸಕರು ಮತ್ತು ಅಧ್ಯಾಪಕೇತರ ಸಿಬ್ಬಂದಿ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬಸ್ಸಿಲ್ಲ ಶಾಲೆಗೆ ಹೋಗೋದ್ ಹೆಂಗೇ…!?

ನಾಳೆ ಶಿವಮೊಗ್ಗ ಹಾಗೂ ಭದ್ರಾವತಿ ನಗರದ ಶಾಲಾ ಕಾಲೇಜುಗಳಿಗೆ ರಜೆ ನೀಡಿರುವುದು ಸರಿಯಷ್ಟೇ. ಬಸ್ ಸಂಚಾರ ವಿರಳ ಎನ್ನಲಾಗಿದೆ. ಸಿಟಿ ಬಸ್ ಗಳು ಚಾಲನೆ ನಿಲ್ಲಿಸಿವೆ. ಹೀಗಿದ್ದಾಗ ಹೇಗೆ ತಾನೇ ಗ್ರಾಮೀಣ ಪ್ರದೇಶಕ್ಕೆ ಹೋಗುವ ಶಿಕ್ಷಕರು ಹಾಗೂ ಇತರರು ಹೋಗಲು ಸಾಧ್ಯ. ರಜೆಯನ್ನು ತಾಲ್ಲೂಕಿಗೆ ವಿಸ್ತರಿಸುವಂತೆ ಕೋರಲಾಗಿದೆ.

Exit mobile version