Site icon TUNGATARANGA

ಹದಿಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ/ ಅರೋಪಿಗೆ 20 ವರ್ಷ ಕಠಿಣ ಸಜೆ

ಶಿವಮೊಗ್ಗ, ಆ.18:
ಆಗುಂಬೆ ಪೊಲೀಸ್‌ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿ 13 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿ ಮೇಲೆ ಮಕ್ಸೂದ್‌ ಎಂಬ ವ್ಯಕ್ತಿಯು ಲೈಂಗಿಕ ದೌರ್ಜನ್ಯ ವೆಸಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ದಾಖಲಾಗಿದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣದ ಆರೋಪಿಗೆ ಇಪ್ಪತ್ತು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಶಿವಮೊಗ್ಗದ The Addl District and Sessions, FTSC–II (POCSO) ನ್ಯಾಯಾಲಯವು 20 ವರ್ಷ. ಕಠಿಣ ಕಾರಾಗೃಹ ವಾಸ 60 ಸಾವಿರ ರೂ. ದಂಡ ವಿಧಿಸಿ ತೀರ್ಪುನೀಡಿ ಆದೇಶಿದೆ.

ದಿನಾಂಕಃ-29-06-2021 ರಂದು ಸಂಜೆ ನಡೆದ ಘಟನೆಯ ಬಗ್ಗೆ ಅಂದಿನ ತನಿಖಾಧಿಕಾರಿಗಳಾದ ತೀರ್ಥಹಳ್ಳಿ ಸಿಪಿಐ ಪ್ರವೀಣ್ ನೀಲಮ್ಮನವರ್ ಪ್ರಕರಣದ ತನಿಖೆ ಕೈಗೊಂಡು ಸದರಿ ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, The Addl District and Sessions Court, FTSC–II (POCSO) Shivamogga ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮೋಹನ ಜೆ.ಎಸ್ ರವರು ಆರೋಪಿ ಮೊಹಮ್ಮದ್‌ ಮಕ್ಸೂದ್‌ ಎಂ.ಹೆಚ್‌, (23) ವಿರುದ್ಧ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ತೀರ್ಫು ನೀಡಿದ್ದಾರೆ.


ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ.

Exit mobile version