ಆ. 20 ರಂದು ಜಿಲ್ಲೆಯ ವಿವಿಧೆಡೆ ವಿದ್ಯುತ್ ಅದಾಲತ್
ಶಿವಮೊಗ್ಗ, ಆ.18:
ಜಿಲ್ಲೆಯ ವಿವಿಧೆಡೆ ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದ ಗ್ರಾಹಕರ ಸಮಸ್ಯೆಗಳನ್ನು ಪರಿಹರಿಸಲು ಆಗಸ್ಟ್ 20 ರಂದು ಬೆಳಿಗ್ಗೆ 10.30 ರಿಂದ ಮೂರನೇ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ತಾಲೂಕು ಹರಮಘಟ್ಟ, ಮುದ್ದಿನಕೊಪ್ಪ, ತೀರ್ಥಹಳ್ಳಿ ತಾಲೂಕು ಬಸವಾನಿ, ತಳಲೆ, ಭದ್ರಾವತಿ ತಾಲೂಕು ಹಾತಿಕಟ್ಟೆ, ಕಾಗೆ ಕೊಡಮಗ್ಗೆ, ಸಾಗರ ತಾಲೂಕು ಕುಂದೂರು, ಅರಲಗೋಡು, ಹೊಸನಗರ ತಾಲೂಕು ಕೆಂಚನಾಳ, ಸೊರಬ ತಾಲೂಕು ಹೀರೆಕಲಗೋಡು, ಮೂಡಿ ಹಾಗೂ ಶಿಕಾರಿಪುರ ತಾಲೂಕು ಎಂ.ಸಿ.ಆರ್.ಪಿ.ಕಾಲೋನಿ, ಹುಲುಗಿನಕೊಪ್ಪ ಈ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು ಆಯಾ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಆ. 20 ರಂದು ವಿದ್ಯುತ್ ಅದಾಲತ್
ಶಿವಮೊಗ್ಗ: ಶ್ರೀರಾಂಪುರ ಶಾಖಾ ವ್ಯಾಪ್ತಿಯ ಮುದ್ದಿನಕೊಪ್ಪ ಗ್ರಾಮದ ಗ್ರಾ.ಪಂ ಕಚೇರಿಯಲ್ಲಿ ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದ ಗ್ರಾಹಕರ ಸಮಸ್ಯೆಗಳನ್ನು ಪರಿಹರಿಸಲು ಆಗಸ್ಟ್ 20 ರಂದು ಬೆಳಿಗ್ಗೆ 10.30 ರಿಂದ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಕುಂಸಿ ಉಪವಿಭಾಗದ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಶಿವಮೊಗ್ಗ ತಾಲೂಕು ಹರಮಘಟ್ಟ ಗ್ರಾಮದ ಗ್ರಾ.ಪಂ ಕಚೇರಿಯಲ್ಲಿ ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದ ಗ್ರಾಹಕರ ಸಮಸ್ಯೆಗಳನ್ನು ಪರಿಹರಿಸಲು ಆಗಸ್ಟ್ 20 ರಂದು ಬೆಳಿಗ್ಗೆ 11.00 ರಿಂದ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಗ್ರಾಮಾಂತರ ಉಪವಿಭಾಗದ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಜನಸಂಪರ್ಕ ಸಭೆ:
ನಗರ ಉಪವಿಭಾಗ-3 ರ ವ್ಯಾಪ್ತಿಯಲ್ಲಿ ಆಗಸ್ಟ್ 19 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಗುಡ್‍ಲಕ್ ಸರ್ಕಲ್ ಹತ್ತಿರ, ಎಸ್.ವಿ.ಬಡಾವಣೆ, ಮೆಸ್ಕಾಂ ಶಿವಮೊಗ್ಗ ಇಲ್ಲಿ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದು,್ದ ಈ ವ್ಯಾಪ್ತಿಯ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಅಹವಾಲುಗಳನ್ನು ನೀಡಬಹುದೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.