ಶಿವಮೊಗ್ಗ,
ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಅಗೌರವ ತೋರಿಸಿರುವ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಹಾನಗರಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್ ನೇತೃತ್ವದಲ್ಲಿ ಪಾಲಿಕೆ ಸದಸ್ಯರು ಇಂದು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಆ.೧೪ರಂದು ಮಹಾನಗರ ಪಾಲಿಕೆ ಒಡೆತನಕ್ಕೆ ಸೇರಿದ ಶಿವಪ್ಪನಾಯಕ ಮಾರುಕಟ್ಟೆ (ಸಿಟಿ ಸೆಂಟರ್ ಮಾಲ್)ಯಲ್ಲಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರದ ಪ್ರಯೋಜಿತ ದೇಶ ವಿಭಜನೆಯ ಭಯಾನಕಥೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿ, ಸುಭಾಷ್‌ಚಂದ್ರಬೋಸ್, ಜವಹರಲಾಲ್ ನೆಹರೂ, ಡಾ.ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರಗಳನ್ನು ಪ್ರಮುಖ ಸ್ಥಳದಲ್ಲಿ ಅಳವಡಿಸದೆ ಕಿರಿದಾದ ಸ್ಥಳದಲ್ಲಿ ಅಳವಡಿಸುವುದರ ಮೂಲಕ ಅಗೌರವ ಉಂಟುಮಾಡಲಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಈ ಘಟನೆಯೂ ಭಾರತೀಯ ನಾಗರೀಕರದ ನಮಗೆ ತೀವ್ರ ನೋವುಂಟು ಮಾಡಿದೆ. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಪಾವಿತ್ರತೆಗೆ ಹಾಗೂ ಆಶಯಕ್ಕೆ ಅಗೌರವ ಉಂಟುಮಾಡಿದ ಕ್ರಮವಾಗಿದೆ. ಅಗೌರವ ತೋರಿಸಿದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಪಾಲಿಕೆಯ ಕಾಂಗ್ರೆಸ್ ಸದಸ್ಯರಾದ ಯಮುನಾ ರಂಗೇಗೌಡ, ಹೆಚ್. ಸಿ.ಯೋಗೀಶ್, ಬಿ.ಎ.ರಮೇಶ್ ಹೆಗಡೆ, ಆರ್.ಸಿ. ನಾಯ್ಕ್, ಮಂಜುಳಾ ಶಿವಣ್ಣ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್ ಇನ್ನಿತರರು ಹಾಜರಿದ್ದರು.