Site icon TUNGATARANGA

ಶಿವಮೊಗ್ಗ / ಶಿಕ್ಷಕರು ಎಲ್ಲಿಯವರೆಗೆ ನನ್ನ ಶಾಲೆ ನನ್ನ ಮನೆ ಎಂದು ಅರಿತುಕೊಳ್ಳುವುದಿಲ್ಲವೋ ಅಲ್ಲಿಯವರೆಗೆ ಅಭಿವೃದ್ದಿ ಸಾಧ್ಯವಾಗುವುದಿಲ್ಲ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ,
ಶಿಕ್ಷಕ ನಮ್ಮೆಲ್ಲರ ಗುರು. ದೇಶದ ಉದ್ದಾರಕ ರಾದ ಅವರು ಭಾರತೀಯ ಶ್ರೇಷ್ಟ ಸಂಸ್ಕೃತಿಯ ಕುರಿತು ಮಕ್ಕಳಿಗೆ ತಿಳಿಸಬೇಕೆಂದು ಶಾಸಕರಾದ ಕೆ.ಎಸ್.ಈಶ್ವರಪ್ಪ ನುಡಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾ ರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸ ಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಶಿಕ್ಷಕರು ಎಲ್ಲಿಯವರೆಗೆ ನನ್ನ ಶಾಲೆ ನನ್ನ ಮನೆ ಎಂದು ಅರಿತುಕೊಳ್ಳುವುದಿಲ್ಲವೋ ಅಲ್ಲೀವ ರೆಗೆ ಅಲ್ಲಿ ಅಭಿವೃದ್ದಿ ಸಾಧ್ಯವಾಗುವುದಿಲ್ಲ. ಶಾಲೆ ಗಳಿಗೆ ಏನು ಬೇಕೆಂದು ಶಿಕ್ಷಕರು, ಎಸ್‌ಡಿಎಂಸಿ ಯವರು ಚರ್ಚಿಸಬೇಕು. ಜನಪ್ರತಿನಿಧಿಗಳ ಬಳಿ ತಿಳಿಸಬೇಕು. ಆಗ ಸುಧಾರಣೆ ಸಾಧ್ಯ. ಉದಾಹರ ಣೆಗೆ ನಗರದ ಕೆ.ಆರ್.ಪುರಂ ಶಾಲೆಯಲ್ಲಿ ಕಳೆದ ಸಾಲಿನಲ್ಲಿ ಮೂಲಭೂತ ಸೌಕರ್ಯದಿಂದ ಕೇವಲ ೮ ಮಕ್ಕಳು ಇದ್ದರು. ಈಗ ಎಲ್ಲ ಮೂಲಭೂತ ಸೌಕರ್ಯದೊಂದಿಗೆ ಉತ್ತಮ ವ್ಯವಸ್ಥೆ ಸೃಷ್ಟಿಸಿರು ವುದರಿಂದ ಪ್ರಸ್ತುತ ೩೦೦ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.


ಸಂಸದರಾದ ಬಿ.ವೈ.ರಾಘವೇಂದ್ರ ಮಾತ ನಾಡಿ, ಅತ್ಯುತ್ತಮ ಪ್ರಜೆಗಳನ್ನು ತಯಾರು ಮಾಡುವ ದೊಡ್ಡ ಜವಾಬ್ದಾರಿ ಹೊತ್ತಿರುವ ಶಿಕ್ಷಕರಿಗೆ ಪ್ರಸ್ತುತ ವೈಜ್ಞಾನಿಕ ಯುಗದಲ್ಲಿ ತಾವು ಅಪ್‌ಗ್ರೇಡ್ ಆಗಿ ಮಕ್ಕಳಿಗೆ ಶಿಕ್ಷಣ ನೀಡುವ ದೊಡ್ಡ ಸವಾಲು ಇದೆ. ಯಾವುದೇ ರೀತಿಯ ಬಡ್ತಿ ಇಲ್ಲದೇ ಒಂದೇ ಹುದ್ದೆಯಲ್ಲಿ ಪಾಠ ಹೇಳುವ ಶಿಕ್ಷಕರನ್ನು ಗುರುತಿಸುವ ಕೆಲಸ ಹಾಗೂ ಅವರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಸರ್ಕಾರದ್ದಾಗಿದೆ ಎಂದರು.


ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ, ವಿಧಾನ ಪರಿಷತ್ ಶಾಸಕ ಎಸ್. ರುದ್ರೇಗೌಡರು, ಡಿಡಿಪಿಐ ಪರಮೇಶ್ವರಪ್ಪ ಸಿ.ಆರ್ ಸ್ವಾಗತಿಸಿದರು. ಮಹಾನಗರಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಎನ್.ಜಿ. ನಾಗರಾಜ್, ಪಾಲಿಕೆ ಸದಸ್ಯರು, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿ ಷ್ಟಾದಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಮತ್ತಿತರರಿದ್ದರು.

Exit mobile version