ಶಿವಮೊಗ್ಗ ಮೇಯರ್-ಉಪಮೇಯರ್ ಚುನಾವಣೆಗೆ ತಡೆ, ವೇಳಾಪಟ್ಟಿ ಹಿಂಪಡೆತ: ಕಾರಣವೇನು?
ಶಿವಮೊಗ್ಗ: ಮಹತ್ವದ ಬೆಳವಣಿಗೆಯೊಂದರಲ್ಲಿ ಸೆ.13ರಂದು ನಿಗದಿಯಾಗಿದ್ದ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ರಾಜ್ಯ ಹೈಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ ವೇಳಾಪಟ್ಟಿಯನ್ನು ಹಿಂಪಡೆಯಲಾಗಿದೆ.
ಈ ಕುರಿತಂತೆ ಹೆಚ್ಚುವರಿ ಪ್ರಾದೇಶಿಕ ಆಯುಕ್ತರು ಸೂಚನೆ ಹೊರಡಿಸಿದ್ದು, ಸೆ.13ರಂದು ನಿಗದಿಯಾಗಿದ್ದ ಚುನಾವಣಾ ವೇಳಾಪಟ್ಟಿಯನ್ನು ಹಿಂಪಡೆಯಲಾಗಿದೆ ಎಂದು ತಿಳಿಸಲಾಗಿದೆ.
ಪಾಲಿಕೆಯಲ್ಲಿನ ಕಿತ್ತಾಟ, ಇತರೆ ಎಲ್ಲಾ ಇರುತ್ತೆ ನೋಡಿ tungatarangcom
ರಾಜ್ಯ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಯ ವಿಚಾರಣೆ ನಡೆಸಿ ಮಧ್ಯಂತರ ಆದೇಶ ಹೊರಡಿಸಿರುವ ನ್ಯಾಯಾಲಯ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು ಇಂದು ಸೂಚನೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿಯನ್ನು ಹಿಂಪಡೆಯಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಈ ಎಲ್ಲಾ ವಿಚಾರಗಳ ಬಗ್ಗೆ ಸದಾ ನೋಡ್ತಾ ಇರಿ tungataranga.com