ನಗರದ ಹೊರವಲಯದಲ್ಲಿರುವ ಮಲವಗೊಪ್ಪದ ಇಂದಿರಾ ಕಾಲೊನಿ ೧ ನೇ ತಿರುವಿನಲ್ಲಿ ಮನೆ ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದಾರೆ.
ಗೌರಮ್ಮ(೬೨) ಮೃತಪಟ್ಟ ಮಹಿಳೆ. ಭಾರಿ ಮಳೆಯಿಂದ ಶಿಥಿಲಗೊಂಡಿದ್ದ ಮನೆ ಗೋಡೆ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಮಹಾನಗರ ಪಾಲಿಕೆ ಸದಸ್ಯ ಆರ್.ಸಿ. ನಾಯ್ಕ್, ತಹಸೀಲ್ದಾರ್ ನಾಗರಾಜ್ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.