Site icon TUNGATARANGA

ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸಂವೃದ್ಧಿ (ಟ್ರಸ್ಟ್.) ಹಾಗೂ ಶಂಕರ ಕಣ್ಣಿನ ಆಸ್ಪತ್ರೆಯ ವತಿಯಿಂದ ಉಚಿತ ನೇತ್ರ ತಪಾಸಣೆ

ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸಂವೃದ್ಧಿ ಟ್ರಸ್ಟ್ (ರಿ.) ಹಾಗೂ ಶ್ರೀ ಶಂಕರ ಕಣ್ಣಿನ ಆಸ್ಪತ್ರೆಯ ವತಿಯಿಂದ ಶಿವಮೊಗ್ಗ ನಗರದ ಹೊಸಮನೆ ಬಡವಾಣಿಯಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು..

.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರೆರೇಪಿತ ಸಂಸ್ಥೆಯಾದ ಕೇಶವ ಚಿಕಿತ್ಸಾಲಯದಲ್ಲಿ
ಈ ಕಾರ್ಯಕ್ರಮ ನಡೆದಿದ್ದು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಶಂಕರ್ ಕಣ್ಣಿನ ಆಸ್ಪತ್ರೆಗೆ ವೈದ್ಯರಾದ ಡಾ. ವಿಶ್ವಾಸ್ ರವರ ನೇತೃತ್ವದಲ್ಲಿ ತಪಾಸಣಾ ಶಿಬಿರ ಪ್ರಾರಂಭವಾಯಿತು….

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂವೃದ್ಧಿ ಟ್ರಸ್ಟ್ ನ ತೇಜಸ್ವಿನಿ ಸಿ. ಎಸ್ ವಹಿಸಿದ್ದರು, ಟ್ರಸ್ಟ್ ನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ರೇಖಾ ರಂಗನಾಥ್, ಸೇರಿದಂತೆ ಇತರ ಪ್ರಮುಖರು , ಸಂವೃದ್ಧಿ ಟ್ರಸ್ಟ್ ನ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು…
ಒಟ್ಟು 175 ಜನರು ಕಣ್ಣಿನ ತಪಾಸಣೆ ಮಾಡಿಸಿ ಕೊಂಡರು

Exit mobile version