ಬೆಂಗಳೂರು,
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ಅವಧಿಯಲ್ಲಿ ನಡೆದ ಶಿಕ್ಷಕರ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸರ್ಕಾರ ಆರೋಪ ಮಾಡಿದೆ. ಈ ಬಗ್ಗೆ ಸರ್ಕಾರ ಸಿಬಿಐ ಸೇರಿದಂತೆ ಇನ್ನಿತರ ಸಂಸ್ಥೆಗಳ ಮೂಲಕ ತನಿಖೆ ನಡೆಸಲಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಒತ್ತಾಯಿಸಿದರು.
ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಸಚಿವರು ನೇಮಕಾತಿಗೆ ಮಾತ್ರ ಅನುಮತಿ ನೀಡುತ್ತಾರೆ. ಆಯ್ಕೆ ಪ್ರಕ್ರಿಯೆಯು ಜಂಟಿ ನಿರ್ದೇಶಕರ ನೇತೃತ್ವದಲ್ಲಿ ನಡೆಯುತ್ತಿದೆ. ಅಧಿಕಾರಿಗಳು ಭಾಗಿಯಾಗಿದ್ದರೆ ಶಿಕ್ಷೆಯಾಗಲಿ ಎಂದು ಆಗ್ರಹಿಸಿದರು.
ಕಾಗೇರಿ ಹಾಗೂ ನಾನು ಸಚಿವನಾಗಿದ್ದಾಗ ಶಿಕ್ಷರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಒಂದು ವೇಳೆ ಅಕ್ರಮ ನಡೆದಿದ್ದರೆ ಅದು ಅಧಿಕಾರಿಗಳ ಮಟ್ಟದಲ್ಲಿ ನಡೆದಿರಬಹುದು. ತಪ್ಪಿತಸ್ಥರಿಗೆ ಶಿಕ್ಷೆಯಾಗುವ ಸಂಬಂಧ ಸರ್ಕಾರ ಇದನ್ನು ತನಿಖೆ ನಡೆಸಲಿ ಎಂದು ಹೇಳಿದರು