Site icon TUNGATARANGA

ಮೋದಿ ಅವಧಿಯಲ್ಲಿ ಭಾರತ ಅಭಿವೃದ್ದಿ : ಕೆ.ಇ. ಕಾಂತೇಶ್

ಮೋದಿ ಅವರು ಪ್ರಧಾನಿಯಾದ ಮೇಲೆ ಎಲ್ಲ ಕ್ಷೇತ್ರಗಳಲ್ಲೂ ಭಾರತ ಅಭಿವೃದ್ಧಿ ಕಾಣುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ. ಕಾಂತೇಶ್ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರ 72 ನೇ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಇಂದು ನಗರದ ಕಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಕೊರೋನಾ ಸಂದರ್ಭದಲ್ಲಿ ಮಕ್ಕಳಿಗೆ ಶಾಲೆಗಳಿಗೆ ರಜೆ ಇದ್ದರೂ ಪಡಿತರವನ್ನು ಮಕ್ಕಳ ಮನೆಗಳಿಗೆ ತಲುಪಿಸಲಾಗಿತ್ತು. ಅದೇ ರೀತಿ ಶಾಲಾ ಮಕ್ಕಳಿಗೆ ಸೈಕಲ್ ಗಳನ್ನು ಉಚಿತವಾಗಿ ನೀಡಲಾಯಿತು. ವಿಶ್ವ ಯೋಗದಿನ ಘೋಷಿಸುವ ಮೂಲಕ ಹಾಗೂ ಶಾಲೆಗಳಲ್ಲಿ ಕೂಡ ಯೋಗ ತರಗತಿಯನ್ನು ಆರಂಭಿಸುವ ಮೂಲಕ ಮಕ್ಕಳಲ್ಲಿ ಸಂಸ್ಕಾರ ಮತ್ತು ಸಂಸ್ಕೃತಿಯ ಅರಿವನ್ನು ಮೂಡಿಸಲಾಗಿತ್ತು ಎಂದರು. 

ಸರ್ಕಾರಿ ಶಾಲೆಗಳಲ್ಲಿ ಅನೇಕ ಕೊರತೆಗಳಿರುವುದು ನಿಜ. ಈ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಶಾಲೆಗಳ ದುರಸ್ತಿಯನ್ನು ಸಾರ್ವಜನಿಕರು ಮತ್ತು ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಮಾಡಲಾಗಿತ್ತು. ಕಲ್ಲಹಳ್ಳಿ ಶಾಲೆಯಲ್ಲೂ ಅನೇಕ ಸಮಸ್ಯೆಗಳಿವೆ. ಪ್ರಮುಖವಾಗಿ ಶೌಚಾಲಯ ನಿರ್ಮಾಣ, ಸದೃಢವಾದ ಗೇಟ್, ಕಮಾನು ಮತ್ತು ಪಠ್ಯಕ್ಕೆ ಪೂರಕವಾದ ಗೋಡೆ ಬರಹ, ಭಿತ್ತಿಚಿತ್ರಗಳ ನಿರ್ಮಾಣ ಮೊದಲಾದ ಬೇಡಿಕೆಗಳಿವೆ. ಅದನ್ನು ಕೂಡ ಸಂಬಂಧಪಟ್ಟವರ ಗಮನಕ್ಕೆ ತಂದು ಈಡೇರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ಗಳನ್ನು ವಿತರಿಸಲಾಯಿತು. ಸೂಡಾ ಅಧ್ಯಕ್ಷ ನಾಗರಾಜ್, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಬಿಜೆಪಿ ಎಸ್.ಟಿ. ಮೋರ್ಚಾ ಅಧ್ಯಕ್ಷ, ಎಸ್.ಡಿ.ಎಂ.ಸಿ. ಸದಸ್ಯ ರಂಗೇಶ್, ನಂಜುಂಡಪ್ಪ, ಬಿಜೆಪಿ ನಗರ ಕಾರ್ಯದರ್ಶಿ ಸಂತೋಷ್ ಬಳ್ಳೆಕೆರೆ, ಮುಖ್ಯ ಶಿಕ್ಷಕಿ ಪಾರ್ವತಮ್ಮ, ಮಂಜುಳಾ ರಾಜ್, ರಾಜಪ್ಪ ಮೊದಲಾದವರಿದ್ದರು.

Exit mobile version