ಭದ್ರಾವತಿ,ಸೆ.09:
ಇಲ್ಲಿನ ನಗರಸಭೆ ಆಯುಕ್ತ ಮನೋಹರ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ಅವರೇ ಹೇಳಿದ್ದ, ರೋಗದ ಯಾವುದೇ ಲಕ್ಷಣಗಳಿಲ್ಲದಿರುವುದರಿಂದ ಅವರು ಹೋಂ ಕ್ವಾರಂಟೈನ್’ಗೆ ಒಳಗಾಗಿದ್ದಾರೆ.
ಆಯುಕ್ತರು ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದು ಇಂದು ಪಾಸಿಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ನಿವಾಸದಲ್ಲಿಯೇ 10 ದಿನಗಳ ಕಾಲ ಕ್ವಾರಂಟೈನ್ ಆಗಿರಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತಂತೆ ಮಾದ್ಯಮಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಆಯುಕ್ತರು, ತಮಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಇಡೀಯ ನಗರಸಭೆ ಕಚೇರಿಯಲ್ಲಿ ಸ್ಯಾನಿಟೈಸ್ ಮಾಡಲಾಗಿದೆ. ಎರಡು ದಿನಗಳ ಕಾಲ ಅಂದರೆ ಗುರುವಾರ ಹಾಗೂ ಶುಕ್ರವಾರದಿಂದ ನಗರಸಭೆಯನ್ನು ಸೀಲ್ ಡೌನ್ ಮಾಡಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿರುತ್ತದೆ ಎಂದರು.
ಕಚೇರಿ ಸಂಬಂಧಿತ ಕೆಲಸ ಕಾರ್ಯಗಳು ಹಾಗೂ ತುರ್ತು ಕಾರ್ಯಗಳು ಮಾತ್ರ ನಡೆಯಲಿದ್ದು, ಸಾರ್ವಜನಿಕರಿಗೆ ಎರಡು ದಿನಗಳ ಕಾಲ ಯಾವುದೇ ಸೇವೆ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.