Site icon TUNGATARANGA

ಸ್ಪ್ರಿಂಕ್ಲರ್ ಸೆಟ್ ಸೌಲಭ್ಯ ನೀಡಲು ಅರ್ಜಿ ಆಹ್ವಾನ


ಶಿವಮೊಗ್ಗ ಅ.10 :
ಭಾರತ ಸಂವಿಧಾನ ಅನುಚ್ಚೇದ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಜಿಲ್ಲೆಯ ಪರಿಶಿಷ್ಟ ಪಂಗಡದವರಿಗೆ ಸ್ಪ್ರಿಂಕ್ಲರ್ ಸೆಟ್ ಕಾರ್ಯಕ್ರಮ ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 10 ಕಡೆಯ ದಿನವಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಇವರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅಜ್ಜಪ್ಪ ಹೆಚ್ ಇ ತಿಳಿಸಿದ್ದಾರೆ.

Exit mobile version