Site icon TUNGATARANGA

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಅಹ್ವಾನಿಸಲಾಗಿದೆ ಆಸಕ್ತರು ಈ ಕೂಡಲೇ ಸಲ್ಲಿಸಿ


ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ೨೦೨೨-೨೩ನೇ ಸಾಲಿಗೆ

ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳು) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.


ಆಸಕ್ತರು ಇಲಾಖಾ ವೆಬ್‌ಸೈಟ್ www.bcwd.karnataka.gov.in

ರಲ್ಲಿ ದಿ: ೧೦/೧೧/೨೦೨೨ ರೊಳಗಾಗಿ ಸಲ್ಲಿಸುವುದು. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ಪ್ರವೇಶಕ್ಕೆ ಬೇಕಾದ ಅರ್ಹತೆ, ದಾಖಲೆಗಳ ವಿವರಗಳನ್ನು ವೆಬ್‌ಸೈಟ್ ಮೂಲಕ ಪಡೆದುಕೊಳ್ಳುವುದು. ತಾಂತ್ರಿಕ ತೊಂದರೆಗಳಾದಲ್ಲಿ

bಛಿತಿಜ.hosಣeಟs@ಞಚಿಡಿಟಿಚಿಣಚಿಞಚಿ.gov. ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ೦೮೦-೬೫೯೭೦೦೦೬/ ೦೮೧೮೨-೨೨೨೧೨೯ ಗಳನ್ನು ಸಂಪರ್ಕಿಸುವುದು.

Exit mobile version