Site icon TUNGATARANGA

ಮಕ್ಕಳೊಂದಿಗೆ ಶಿಕ್ಷಕರ ಉತ್ತಮ ಒಡನಾಟ ಇರಲಿ: ಶಿಕ್ಷಕರಿಗೆ ಶ್ರೀ ಪ್ರಸನ್ನನಾಥ ಸ್ವಾಮೀಜಿ ಕರೆ


ಕಾರೇಹಳ್ಳಿಯ, ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರ ರಾಜ್ಯಮಟ್ಟದ ಕಾರ್ಯಾಗಾರ


ಶಿವಮೊಗ್ಗ, ಅ.21: ವೃತ್ತಿಗೆ ಗೌರವ ಕೊಡಿ, ಯಾವ ವ್ಯಕ್ತಿ ವೃತ್ತಿಗೆ ಗೌರವ ಕೊಡುತ್ತಾನೋ ಆ ವ್ಯಕ್ತಿಯ ಬದುಕು ಹಸನಾಗುವುದು, ಪ್ರತಿಯೊಬ್ಬ ಶಿಕ್ಷಕರು ಮಕ್ಕಳ ಜೊತೆ ಉತ್ತಮ ಒಡನಾಟದಿಂದ ಇರಬೇಕು, ಅವರಿಗೆ ಬೇಕು-ಬೇಡಗಳ ಬಗ್ಗೆ ತಿಳಿದು ತರಬೇತಿ ಕೊಟ್ಟಾಗ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಧೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಗಾರಕ್ಕೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.


ಅವರು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ವ್ಯಾಪ್ತಿಯ ವಿವಿಧ ಜಿಲ್ಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಎರಡು ದಿನಗಳವರಗೆ ನಡೆಯುತ್ತಿರುವ ರಾಜ್ಯಮಟ್ಟದ ಕಾರ್ಯಾಗಾರವನ್ನು ಭದ್ರಾವತಿಯ ಬಿಜಿಎಸ್ ಕೇಂದ್ರೀಯ ವಿದ್ಯಾಲಯದ ಕಾರೇಹಳ್ಳಿಯ ಬಿಜಿಎಸ್ ಸಭಾಭವನದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ, ಒಂದು ಶಾಲೆಯಲ್ಲಿ ಮಕ್ಕಳಲ್ಲಿ ಶಿಸ್ತು, ಸಂಯಮ, ಇದೆ ಅಂದರೆ ಅದಕ್ಕೆ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ದೊಡ್ಡದು, ಪೋಷಕರ ಜೊತೆಗೆ ಆತ್ಮೀಯತೆಯಿಂದ ಇರಬೇಕು ಎಂದರು.

ಈಗಾಗಲೇ ರಾಜ್ಯದ ನುರಿತ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಂಪನ್ಮೂಲ ವ್ಯಕ್ತಿಗಳಿಂದ ತಮಗೆ ಕಾರ್ಯಾಗಾರ ನಡೆಸುತ್ತಿದ್ದು,ಇದರ ಸದುಪಯೋಗ ಪಡೆದುಕೊಂಡು, ತಮ್ಮ ವಿದ್ಯಾರ್ಥಿಗಳಿಗೆ ತರಬೇತಿಯನ್ನು ಕೊಟ್ಟು ಕ್ರೀಡಾ ಕ್ಷೇತ್ರದಲ್ಲಿ ಭಾರತದ ಧ್ವಜವನ್ನು ಎತ್ತಿ ಹಿಡಿಯುವ ಕೆಲಸವನ್ನು ತಾವು ಮಾಡಬೇಕಾಗಿದೆ ಎಂದು ಶಿಕ್ಷಕರಿಗೆ ಕಿವಿ ಮಾತು ತಿಳಿಸಿದರು.


ಸಾರ್ವಜನಿಕ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ ಬೆಂಗಳೂರು. ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ಎಸ್.ಅನಂತನಾಯ್ಕ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ, ಮಕ್ಕಳಿಗೆ ತರಬೇತಿ, ಉತ್ತಮ ಕೌಶಲ್ಯಗಳನ್ನು ಗುರುತಿಸಿ ಆಯ್ಕೆ ಮಾಡುವುದು, ನಿರಂತರ ಅಭ್ಯಾಸ ಮಾಡುವುದರ ಮೂಲಕ ಅವರ ಸಾಧನೆಗೆ ಶಕ್ತಿ ತುಂಬುವುದು, ಮಕ್ಕಳಲ್ಲಿ ಅನೇಕ ನೂನ್ಯತೆ ಗಳಿರುತ್ತವೆ, ಅವುಗಳನ್ನು ತಿದ್ದಿ-ತೀಡಿ ಉತ್ತಮ ರೀತಿಯಲ್ಲಿ ಒಬ್ಬ ಕ್ರೀಡಾಪಟುವನ್ನು ಸಜ್ಜುಗೊಳಿಸುವುದರಲ್ಲಿ ತಮ್ಮಗಳ ಪಾತ್ರ ದೊಡ್ಡದು ಎಂದರು.
ಈ ಕಾರ್ಯಗಾರದಲ್ಲಿ ವಿವಿಧ ಜಿಲ್ಲೆಗಳಿಂದ ಸುಮಾರು 250ಕ್ಕೂ ಹೆಚ್ಚು ದೈಹಿಕ ಶಿಕ್ಷಣ ಶಿಕ್ಷಕರು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಪಡೆಯುತ್ತಿರುವುದು ಮತ್ತೊಂದು ವಿಶೇಷ.
ಈ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ವಿಶ್ವದೇವ ನಂದಪುರಿ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬ್ರಹ್ಮಚಾರಿಗಳಾದ ಶ್ರೀ ನಿಚ್ಚಲಾನಂದನಾಥ ಸ್ವಾಮೀಜಿಯವರು, ಶ್ರೀ ಸಂವಿಧಾನ ನಂದನಾಥ ಸ್ವಾಮೀಜಿಯವರು, ಶ್ರೀ ರಾಜಶೇಖರನಾಥ ಸ್ವಾಮೀಜಿಯವರು, ಸಂಪನ್ಮೂಲ ವ್ಯಕ್ತಿಗಳಾದ ಲಕ್ಷ್ಮೀನಾರಾಯಣ್, ಬಾಲಾಜಿ ಪ್ರಭು, ದೇಸಾಯಿ, ಪ್ರಕಾಶ್, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಆಡಳಿತಾಧಿಕಾರಿಗಳಾದ ಡಾ. ಎ. ಟಿ. ಶಿವರಾಮ ರವರು, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಭದ್ರಾವತಿಯ ಆಡಳಿತಾಧಿಕಾರಿಗಳಾದ ಜಗದೀಶ್ ಬಿ., ಬಿಜಿಎಸ್ ಕೇಂದ್ರೀಯ ಶಾಲೆಯ ಅಮುದ ಸಿ. ಮುನಿರಾಜು ಹಾಗೂ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಶಿಕ್ಷಕಿಯರು ಉಪಸ್ಥಿತರಿದ್ದರು.

Exit mobile version