ಶಿವಮೊಗ್ಗ,
ಭದ್ರಾವತಿ ಶಾಕ ಬಿ.ಕೆ ಸಂಗಮೇಶ್ ಅವರ ಬೆಲೆ ಕೇವಲ ೫೦ ಕೋಟಿಯೇ? ಎಂದು ಶಾಸಕ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಸಂಗಮೇಶ್ ಅವರನ್ನು ಬಿಜೆಪಿಗೆ ಕರೆತರಲು ೫೦ ಕೋಟಿ ನೀಡುವ ಆಮಿಷ ಒಡ್ಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಿಕೆಶಿ ಹೇಳಿಕೆಗೆ ವ್ಯಂಗ್ಯವಾಡಿರುವ ಈಶ್ವರಪ್ಪ
, ಸಂಗಮೇಶ್ ಬೆಲೆ ಕೇವಲ ೫೦ ಕೋಟಿಯೇ ಕನಿಷ್ಠ ೫೦೦ ಕೋಟಿಯಾದರೂ ಬೇಡವೇ. ಡಿಕೆಶಿಗೆ ಶಾಸಕರ ಬೆಲೆ ಗೊತ್ತಿಲ್ಲ. ನಾನು ಮಾಡಿದ್ದು ೫೦೦ ಕೋಟಿ ಆಫರ್ ಎಂದು ವ್ಯಂಗ್ಯವಾಗಿ ತಿರುಗೇಟು ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರು ಕೋಮು ಗಲಬೆಗೆ ಈಶ್ವರಪ್ಪ ಕಾರಣ ಎಂದು ಹೇಳಿದ್ದಾರೆ. ಅವರ ಹೇಳಿಕೆ ಆಶ್ಚರ್ಯ ತಂದಿದೆ. ಅವರಿಗೆ ಉತ್ತರ ಕೊಡುವ ಅಗತ್ಯ ಇಲ್ಲ ಎಂದರು. ಹಿಂದುಳಿದ ವರ್ಗಗಳ ಬಗ್ಗೆ ಕಾಂಗ್ರೆಸ್ ಒಲವು ತೋರಿಸುವುದರಲ್ಲಿ ಅರ್ಥವೇ ಇಲ್ಲ. ಬಿ.ಆರ್. ಅಂಬೇಡ್ಕರ್, ಜಗಜೀವನ ರಾಮ್ ಅವರನ್ನು ಸೋಲಿಸಿದ ಕಾಂಗ್ರೆಸ್‌ಗೆ ಒಬಿಸಿ ಬಗ್ಗೆ ಮಾತನಾಡುವ ಯಾವ ನೈತಿಕತೆಯಿದೆ ಎಂದು ಪ್ರಶ್ನೆ ಮಾಡಿದರು.
ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ಎಸ್.ಎನ್. ಚನ್ನಬಸಪ್ಪ, ಉಪಮೇಯರ್ ಲಕ್ಷ್ಮೀಶಂಕರ್ ನಾಯ್ಕ್ ಮತ್ತಿತರರು ಇದ್ದರು.