Site icon TUNGATARANGA

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು/ ಸತ್ಯಾಸತ್ಯತೆ ಹೊರಬರಲಿ ಮಾಜಿ ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿರುವ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ, ತನಿಖೆ ನಡೆದು ಸತ್ಯಾಸತ್ಯತೆ ಹೊರ ಬರಲಿ ಎಂದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಆರೋಪ, ಪ್ರತ್ಯಾರೋಪ ಸಹಜ. ಆದರೆ ತನಿಖೆಯಿಂದಲೇ ಎಲ್ಲವೂ ಹೊರಬರಲಿ ಎಂದು ಹೇಳಿದರು.

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅದರಿಂದ ಕಾಂಗ್ರೆಸ್ ಗೆ ಯಾವುದೇ ಪ್ರಯೋಜನವಾಗುವುದಿಲ್ಲ. ಪ್ರಧಾನಿ ಮೋದಿ ವಿಶ್ವನಾಯಕರಿದ್ದಾರೆ. ಅವರ ನೇತೃತ್ವದಲ್ಲಿ ನಾವು ಚುನಾವಣೆ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಿಂದುಳಿದ ವರ್ಗದವರನ್ನು ಸಿಎಂ ಮಾಡಲಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪ್ರಧಾನಿಯೇ ಹಿಂದುಳಿದ ವರ್ಗದವರಾಗಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ಅನೇಕರು ಸಿಎಂ ಆಗಿದ್ದಾರೆ. ಕಾಂಗ್ರೆಸ್ ದೇಶದ ಎರಡೂ ರಾಜ್ಯಗಳಲ್ಲಿ ಮಾತ್ರ ಅಧಿಕಾರದಲ್ಲಿದೆ. ಸಿದ್ದರಾಮಯ್ಯ ಹೀಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದರು.

Exit mobile version