Site icon TUNGATARANGA

ಭದ್ರಾವತಿ ತಹಶೀಲ್ದಾರ್ ವಿರುದ್ದ ಲೈಂಗಿಕ ಕಿರುಕುಳ ಆರೋಪ: ಎತ್ತಂಗಡಿ ಮಾಡಿದ ಡಿಸಿ?!

ಭದ್ರಾವತಿ,ಸೆ.15:
ಭದ್ರಾವತಿ ತಹಶೀಲ್ದಾರ್ ಶಿವಕುಮಾರ್ ಅವರನ್ನು ತತಕ್ಷಣದಿಂದಲೇ ಜಾರಿಗೆ ಬರುವಂತೆ ಹುದ್ದೆಯಿಂದ ಬಿಡುಗಡೆಗೊಳಿಸಿ
ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಹಿತದೃಷ್ಠಿಯಿಂದ ಈಗಿನಿಂದಲೇ ಅನ್ವಯವಾಗುವಂತೆ ಶಿವಕುಮಾರ್ ಅವರನ್ನು ಭದ್ರಾವತಿ ತಹಶೀಲ್ದಾರ್ ಹುದ್ದೆಯಿಂದ ಬಿಡುಗಡೆಗೊಳಿಸಿದ್ದಾರೆ.
ಶಿವಮೊಗ್ಗ ತಹಶೀಲ್ದಾರ್ ಅವರಿಗೆ ಹುದ್ದೆಯ ಪ್ರಭಾರವನ್ನು ವಹಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ತಹಶೀಲ್ದಾರ್ ಎಚ್.ಸಿ. ಶಿವಕುಮಾರ್ ಅವರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಗ್ರಾಮ ಲೆಕ್ಕಾಧಿಕಾರಿಗಳ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯೊಬ್ಬರು ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತಾಲ್ಲೂಕು ಕಛೇರಿ, ಭದ್ರಾವತಿ


ತಹಶೀಲ್ದಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.
ದೂರಿನಲ್ಲೇನಿದೆ….?
ತಹಶೀಲ್ದಾರ್ ಎಚ್.ಸಿ. ಶಿವಕುಮಾರ್ ಅವರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಸಬಾ-2 ಹೋಬಳಿಯ ಗ್ರಾಮ ಲೆಕ್ಕಾಧಿಕಾರಿಯೊಬ್ಬರ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆ ದೂರು ದಾಖಲಿಸಿದ್ದು, ತಹಶೀಲ್ದಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಪ್ರಕರಣ ಕುರಿತಂತೆ ಹಳೇನಗರ ಪೊಲೀಸ್ ಠಾಣೆಯ ಬಳಿಯಲ್ಲಿ ಮಹಿಳೆ ಸಂಬಂಧಿ ಹಾಗೂ ಸ್ನೇಹಿತರು ಜಮಾಯಿಸಿ, ತಹಶೀಲ್ದಾರ್ ವಿರುದ್ಧ ಎಫ್’ಐಆರ್ ದಾಖಲಿಸಿ, ಬಂಧಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಸದರಿ ಗ್ರಾಮ ಲೆಕ್ಕಾಧಿಕಾರಿಗಳ ಬಳಿಯಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಪರಮೇಶ್ವರಪ್ಪ ಎನ್ನುವವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ ಪುತ್ರಿ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಈಕೆಗೆ ವೇತನ ಪಾವತಿ ಮಾಡಿಕೊಟ್ಟಿಲ್ಲವೆಂದು ತಹಶೀಲ್ದಾರ್ ಅವರ ಬಳಿ ಕೇಳಲು ತೆರಳಿದ ವೇಳೆ ನೀನು ಒಬ್ಬಳೇ ನನ್ನ ಕ್ವಾಟ್ರಸ್’ಗೆ ಬರಬೇಕು, ನೀನು ನನಗೆ ಸಂತೋಷ ಪಡಿಸಿದರೆ ನಿನ್ನ ಕೆಲಸ ಮಾಡಿಕೊಡುತ್ತೇನೆ ಎಂದು ತಮಗೆ ಕಿರುಕುಳ ನೀಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Exit mobile version