Site icon TUNGATARANGA

ಹಾಲು, ಮೊಸರಿನ ದರ ಹೆಚ್ಚಳಕ್ಕೆ ಸಿಎಂ ತಾತ್ಕಾಲಿಕ ತಡೆ

ಕಲಬುರಗಿ : ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಈ ತಿಂಗಳ 20ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಸದ್ಯ ಹೆಚ್ಚಿಸಿರುವ ಹಾಲು, ಮೊಸರಿನ ದರ ಹೆಚ್ಚಳಕ್ಕೆ ಬ್ರೇಕ್ ಸಿ.ಎಂ ಹಾಕಿದ್ದಾರೆ.

ಸೇಡಂನಲ್ಲಿ ಹಾಲಿನ ದರ ಪರಿಷ್ಕರಣೆ ಬಗ್ಗೆ ಮಾಧ್ಯಮವರಿಗೆ ಪ್ರತಿಕ್ರಿಯಿಸುತ್ತಾ, ಕಳೆದ ಹಲವಾರು ತಿಂಗಳಿನಿಂದ ಚರ್ಚೆಯಾಗುತ್ತಿದ್ದು, ಈ ತಿಂಗಳ 20ನೇ ತಾರೀಖಿನ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.


ಚರ್ಮ ಗಂಟು ರೋಗ, ಅತಿವೃಷ್ಟಿ ಸೇರಿದಂತೆ ಇತರೆ ಕಾರಣಗಳಿಂದ ಸಂಕಷ್ಟಕ್ಕೆ ಸಿಲುಕಿರುವಂತ ರೈತರಿಗೆ ನೆರವಾಗುವ ನಿಟ್ಟಿನಲ್ಲಿ, ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡಲಾಗಿತ್ತು.
ಈ ಕುರಿತಂತೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಮಾಹಿತಿ ಬಿಡುಗಡೆ ಮಾಡಿದ್ದು, ನಂದಿನಿಯ ಎಲ್ಲಾ ಮಾದರಿಯ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡಿರುವುದಾಗಿ ತಿಳಿಸಿದೆ.

Exit mobile version