ಶಿವಮೊಗ್ಗ : ನೈರುತ್ಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ 2012 – 2018 ರಲ್ಲಿ ಅಭ್ಯರ್ಥಿಯಾಗಿದ್ದ ಎಸ್.ಪಿ ದಿನೇಶ್ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ.
ರಾಜಕೀಯ, ಶೈಕ್ಷಣಿಕ, ಸಾಮಾಜಿಕ, ಸಹಕಾರ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಎಸ್.ಪಿ ದಿನೇಶ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಹಲವಾರು ಹುದ್ದೆಗಳನ್ನು ಸಮರ್ಥವಾಗಿ ನಿಬಾಯಿಸಿದ್ದಾರೆ.
ಈ ಹಿಂದೆ ಇವರು ಎರಡು ಬಾರಿ ಪದವೀಧರರ ಕ್ಷೇತ್ರದ ಅಭ್ಯರ್ಥಿಯಾಗಿಯೂ ಕಣಕ್ಕಿಳಿದಿದ್ದರು. ಹಾಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು, ಪದವೀಧರರ ಸಹಕಾರ ಸಂಘದ ಅಧ್ಯಕ್ಷ, ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಗೌರವ ಕಾರ್ಯದರ್ಶಿ, ದೇಶೀಯ ವಿದ್ಯಾಶಾಲಾ ಸಮಿತಿಯ ಉಪಾಧ್ಯಕ್ಷ, ಡಿಸಿಸಿ ಬ್ಯಾಂಕ್ ನಿರ್ದೇಶಕ, ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಚೇರ್ಮನ್ ಆಗಿ ಸೇವೆ ಸಲ್ಲಿಸುತ್ತಿರುವ ಇವರು, ಕುವೆಂಪು ವಿಶ್ವವಿದ್ಯಾಲಯದ ಸೆನೆಟ್ ಮತ್ತು ಸಿಂಡಿಕೇಟ್ ಸದಸ್ಯರಾಗಿ ಹಾಗೂ ಕರ್ನಾಟಕ ರಾಜ್ಯ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಕಳೆದ 32 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಪಿ ದಿನೇಶ್, ಪಕ್ಷ ನೀಡುವ ಎಲ್ಲ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಬಾಯಿಸಿದಿದ್ದಾರೆ. ಎನ್ ಎಸ್ ಯು ಐ ಜಿಲ್ಲಾ ಅಧ್ಯಕ್ಷರಾಗಿ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಕಾಂಗ್ರೆಸ್ ನ ಖಜಾಂಚಿ, ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು ಹಾಲಿ ಜಿಲ್ಲಾ ಉಪಾಧ್ಯಕ್ಷರಾಗಿದ್ದಾರೆ. ಜಿಲ್ಲಾ ಕಾಂಗ್ರೆಸ್ ಭವನ ನಿರ್ಮಾಣ ಸಂದರ್ಭದಲ್ಲಿ ಅಂದಿನ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ಹಾಗೂ ಕಟ್ಟಡ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದ ಹಾಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರೊಂದಿಗೆ ಸೇರಿ ಕಟ್ಟಡ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ಹೊತ್ತಿದ್ದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಸ್. ರಾಜಶೇಖರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಿರೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಅರಳಪ್ಪ, ಕೆ.ಸಿ ನಾಗರಾಜ್, ಸಿದ್ದು ಹಂಜಿ, ನವೀನ್, ಮಂಜುನಾಥ್, ಈಶ್ವರ್ ಮತ್ತಿತರರು ಇದ್ದು ಎಸ್.ಪಿ ದಿನೇಶ್ ಅವರಿಗೆ ಟಿಕೆಟ್ ನೀಡುವಂತೆ ಪಕ್ಷದ ಮುಖಂಡರುಗಳನ್ನು ಒತ್ತಾಯಿಸಿದ್ದಾರೆ.
ಪಕ್ಷ ನೀಡಿದ ಎಲ್ಲ ಜವಾಬ್ದಾರಿಗಳನ್ನು ನಿಭಾಯಿದ್ದೇನೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷವನ್ನು ಸದೃಢ ಗೊಳಿಸಿಲು ಒತ್ತು ನೀಡಿದ್ದೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಪಕ್ಷದ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದೇನೆ. ಪಕ್ಷ ಅವಕಾಶ ನೀಡಿದರೆ ಗೆಲ್ಲುವ ವಿಶ್ವಾಸವಿದe- ಎಸ್.ಪಿ ದಿನೇಶ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು