ಪಶುಸಂಗೋಪನೆ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ವಿ.ಚವ್ಹಾಣ್ ಅವರು ನ.25, 26 ಮತ್ತು 27 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.
ನ.24 ರ ಮಧ್ಯಾಹ್ನ ಕುಣಿಗಲ್ ನಿಂದ ಹೊರಟು ಸಂಜೆ 6.30 ಕ್ಕೆ ನಗರಕ್ಕೆ ಆಗಮಿಸಿ ಸಕ್ರ್ಯೂಟ್ ಹೌಸ್ನಲ್ಲಿ ವಾಸ್ತವ್ಯ ಮಾಡುವರು.
ನ.25 ರಂದು ಬೆಳಿಗ್ಗೆ 10 ರಿಂದ 11 ಗಂಟೆವರೆಗೆ ಶಿವಮೊಗ್ಗದಲ್ಲಿ ಗೋಶಾಲೆಗೆ ಭೇಟಿ ನೀಡಿ,
ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ಬಿಜೆಪಿ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ನ.26 ಮತ್ತು 27 ರಂದು ಬಿಜೆಪಿ ವತಿಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನ.27 ರ ಮಧ್ಯಾಹ್ನ 1.30 ಕ್ಕೆ ಶಿವಮೊಗ್ಗದಿಂದ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.