Site icon TUNGATARANGA

ಅಂಗನವಾಡಿ ಕಟ್ಟದ ಅತಿಕ್ರಮಣ | ಪೋಲಿಸ್ ಬಂದೋಬಸ್ತ್ ನೋಂದಿಗೆ ಅಧಿಕೃತವಾಗಿ ಸುಪರ್ದಿಗೆ ಪಡೆದ ಮಹಾನಗರ ಪಾಲಿಕೆ

ನಗರದ ರಾಜೀವ್‌ಗಾಂಧಿ ಬಡಾವಣೆಯಲ್ಲಿ ಇರುವ ಹಳೆಯ ಅಂಗನವಾಡಿ ಕಟ್ಟಡವನ್ನು ಖಾಸಗಿ ವ್ಯಕ್ತಿಯೊಬ್ಬರು ಅತಿಕ್ರಮಣ ಮಾಡಿದ್ದಾರೆ ಎಂಬ ದೂರಿನ ಮೇರೆಗೆ ಮಹಾನಗರ ಪಾಲಿಕೆ ಕಂದಾಯ ವಿಭಾಗದ ಅಧಿಕಾರಿಗಳು ಇಂದು ಪೊಲೀಸ್ ಸುಪರ್ದಿಯೊಂದಿಗೆ ಅಧಿಕೃತವಾಗಿ ತಮ್ಮ ಸುಪರ್ದಿಗೆ ಪಡೆದರು.


ಕಳೆದ ಕೆಲವು ವರ್ಷಗಳಿಂದ ಅ ಹಳೆಯ ಕಟ್ಟಡದಲ್ಲಿ ಅಂಗನವಾಡಿ ನಡೆಯುತ್ತಿತ್ತು. ಪ್ರವಾಹ ಬಂದ ಸಂದರ್ಭದಲ್ಲಿ ಅ ಕಟ್ಟಡದೊಳಗೆ ನೀರುನುಗ್ಗಿ ಹಾನಿಯುಂಟಾಗಿತ್ತು. ಕೊಳಚೆ ನಿರ್ಮೂಲನ ಮಂಡಳಿ ವತಿಯಿಂದ ಆ ಕಟ್ಟಡವನ್ನು ಸಮುದಾಯ ಭವನವಾಗಿ ನಿರ್ಮಿಸಲಾಗಿತ್ತು. ಬಳಿಕ ಮಹಾನಗರ ಪಾಲಿಕೆಗೆ ಹಸ್ತಾಂತರವಾಗಿತ್ತು. ಇತ್ತೀಚೆಗೆ ಸ್ಥಳೀಯ ವ್ಯಕ್ತಿಯೊಬ್ಬರು ತಮಗೆ ಸೇರಿದ ಕಟ್ಟಡ ಎಂದು ಅತಿಕ್ರಮಣಮಾಡಿದ್ದು,

ಅಲ್ಲಿ ಓಡಾಡುವ ಸಾರ್ವಜನಿಕರಿಗೆ ಕೂಡ ಬೆದರಿಕೆ ಹಾಕುತ್ತಿದ್ದರು ಎಂಬುದು ಅಧಿಕಾರಿಗಳ ಆರೋಪ. ಸಾರ್ವಜನಿಕರ ದೂರಿನ ಮೇರೆಗೆ ಪಾಲಿಕೆ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಅದು ಕೊಳಚೆ ನಿರ್ಮೂಲನ ಮಂಡಳಿಯಿಂದ ಪಾಲಿಕೆಗೆ ಹಸ್ತಾಂತರವಾಗಿದ್ದು ೨೨*೫೦ ಜಾಗದಲ್ಲಿ ಸಮುದಾಯ ಭವನದ ನಿರ್ಮಾಣವಾಗಿದ್ದು, ಪಾಲಿಕೆಯ ಸ್ವತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ವಶಕ್ಕೆ ಪಡೆಯುವ ಸಂದರ್ಭದಲ್ಲಿ ತಮ್ಮ ಸ್ವತ್ತು ಎಂದು ಸ್ಥಳೀಯರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇನೆ. ನನ್ನ ಬಳಿ ಸೂಕ್ತ ದಾಖಲೆಗಳಿವೆ ಎಂದು ಅಧಿಕಾರಿಗಳ ಮೇಲೆ ಹರಿಹಾಯ್ದರು. ಆದರೆ ಸಮರ್ಪಕ ದಾಖಲೆ ಇಲ್ಲದ ಕಾರಣ ಪಾಲಿಕೆ ಸ್ವತ್ತನ್ನು ಅಧಿಕಾರಿಗಳು ವಶಪಡಿಸಿಕೊಂಡು ಸೂಕ್ತ ಬಂದೋಬಸ್ತ್ ಮಾಡಿದ್ದಾರೆ.


ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಯಮುನಾ ರಂಗೇಗೌಡ, ಕಂದಾಯ ಅಧಿಕಾರಿ ಸುಜಾತ ಮತ್ತು ಪಾಲಿಕೆಯ ಅಧಿಕಾರಿಗಳು ಹಾಜರಿದ್ದರು

Exit mobile version