Site icon TUNGATARANGA

ಮ್ಯಾಕ್ಸ್ ಆಸ್ಪತ್ರೆಯ ಯುವ ವೈದ್ಯ ನೇಣಿಗೆ ಶರಣಾಗಿದ್ದೇಕೆ?


ಶಿವಮೊಗ್, ಡಿ.01 : ನಗರ ಮ್ಯಾಕ್ಸ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ನಿರ್ವಹಿಸುತ್ತಿರುವ ಯುವ ವೈದ್ಯರೊಬ್ಬರು ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡಾ. ಲೋಲಿತ್ ಬಿ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವುದು. ಗೋಪಾಳದಲ್ಲಿರುವ ಅವರ ನಿವಾಸದಲ್ಲಿ ಲೋಲಿತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಮದುವೆಯಾಗಿ ಒಂದೂವರೆ ವರ್ಷವಷ್ಟೆ ಆಗಿತ್ತು. ಆರು ತಿಂಗಳ ಹೆಣ್ಣು ಮಗುವಿದೆ. ಅವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version