Site icon TUNGATARANGA

ಕಮಲ ಮುಡಿದ ಡಾ|| ಧನಂಜಯ್ ಸರ್ಜಿ ಸಾಮಾನ್ಯ ಕಾರ್ಯಕರ್ತನಂತೆ ಪ್ರಾಮಾಣಿಕವಾಗಿ ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸಿಸುತ್ತೇನೆ


ಭಾರತೀಯ ಜನತಾ ಪಕ್ಷಕ್ಕೆ ಯಾವುದೇ ಷರತ್ತಿಲ್ಲದೆ ಸೇರ್ಪಡೆಗೊಂಡಿದ್ದು, ಪಕ್ಷ ವಹಿಸುವ ಜವಾಬ್ದಾರಿ ಯನ್ನು ಸಾಮಾನ್ಯ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ನಿರ್ವಹಿಸುವೆ ಎಂದು ಜನಪ್ರಿಯ ವೈದ್ಯ ಸರ್ಜಿ ಸಮೂಹ ಸಂಸ್ಥೆ ಚೇರ್ಮನ್ ಡಾ. ಧನಂಜಯ ಸರ್ಜಿ ಹೇಳಿದರು.
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋ ಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಬಿಜೆಪಿಗೆ ಸೇರ್ಪಡೆ ಗೊಂಡು ಮಾತನಾಡಿ, ಮೋದಿ ನೇತೃತ್ವದಲ್ಲಿ ಭಾರತ ದೇಶ ವಿಶ್ವಗುರು ಆಗುವುದು ನಿಶ್ಚಿತ. ಡಿಜಿಟಲ್ ಇಂಡಿಯ, ಸ್ಕಿಲ್ ಇಂಡಿಯ ಸೇರಿದಂತೆ ಪ್ರತಿಯೊಂದು ಕ್ಷೇತ್ರಕ್ಕೂ ವಿಶೇಷ ಆದ್ಯತೆ ನೀಡುತ್ತಿದ್ದಾರೆ ಎಂದು ತಿಳಿಸಿದರು.


ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತ ವಿಶ್ವದಲ್ಲೇ ಬಲಿಷ್ಠ ರಾಷ್ಟ್ರವಾಗಿ ರೂಪುಗೊಳ್ಳುತ್ತಿದೆ. ದೇಶದ ಮೂಲಸೌಕರ್ಯಕ್ಕೆ ಕೊಡುಗೆ, ಸೈನಿಕರಿಗೆ ಶಕ್ತಿ ತುಂಬುವ ಕೆಲಸ ಹಾಗೂ ಎಲ್ಲ ವರ್ಗದ ಜನರಿಗೂ ಅಗತ್ಯ ಯೋಜನೆಗಳ ಜಾರಿ ಸೇರಿದಂತೆ ದೇಶವನ್ನು ಅಭಿವೃದ್ಧಿ ಪಥದಲ್ಲಿ ಪ್ರಧಾನಿ ಮೋದಿ ಮುನ್ನಡೆಸು ತ್ತಿದ್ದಾರೆ


ನಾನು ರಾಜಕೀಯ ಕ್ಷೇತ್ರಕ್ಕೆ ಬರಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರೇರಣೆ. ರೈತ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಿ.ಎಸ್.ವೈ. ಶಿವಮೊಗ್ಗ ಕ್ಷೇತ್ರ ಅಭಿವೃದ್ಧಿ ಪಥದಲ್ಲಿ ಸಾಗಲು ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ಹಾಗೂ ಬಿ.ವೈ.ರಾಘವೇಂದ್ರ ಅವರ ಶ್ರಮ ಕಾರಣ. ಮುಂದಿನ ದಿನಗಳಲ್ಲಿ ಭಾರತೀಯ ಜನತಾ ಪಕ್ಷ ವಹಿಸುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದರು.
ನೂತನವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆ ಯಾದ ಸಾಗರದ ಯುವ ಮುಖಂಡ ಕೆ.ಎಸ್. ಪ್ರಶಾಂತ್ ಮಾತನಾಡಿ, ಸಮಾಜಮುಖಿ ಚಟುವಟಿಕೆ ಹಾಗೂ ರಾಜಕೀಯ ಆಸಕ್ತಿಯಿಂದ ಆರಂಭದಲ್ಲಿ ಉದ್ಯೋಗ ಮೇಳಗಳ ಮೂಲಕ ಸೇವಾ ಕಾರ್ಯ ಆರಂಭಿಸಿದೆ.

ಪ್ರಸ್ತುತ ಯುವನಾಯಕ ಬಿ.ವೈ.ರಾಘ ವೇಂದ್ರ ಅಭಿವೃದ್ಧಿ ಕಾರ್ಯ ನಡೆಸುತ್ತಿದ್ದ ರೀತಿಯಿಂದ ಪ್ರೇರಣೆಯಾಗಿ ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದೇನೆ ಎಂದು ತಿಳಿಸಿದರು.


ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಹಾಗೂ ಆಡಳಿತ ಶೈಲಿ ಮೆಚ್ಚಿ ವಿವಿಧ ಕ್ಷೇತ್ರದ ನಾಯಕರು ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಾರೆ. ಪಕ್ಷ ಸಂಘಟನೆ ಬಲಿಷ್ಠಗೊಳಿಸುವ ಜತೆಯಲ್ಲಿ ದೇಶದ ಅಭಿವೃದ್ಧಿ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದರು.


ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿ, ದೇಶದ ಪ್ರತಿಯೊಬ್ಬ ವ್ಯಕ್ತಿಯ ಏಳಿಗೆಗೂ ಶ್ರಮಿಸುತ್ತಿರುವ ಪಕ್ಷ ಭಾರತೀಯ ಜನತಾ ಪಕ್ಷ. ತತ್ವ ಹಾಗೂ ಸಿದ್ಧಾಂತಗಳನ್ನು ಗಮನಿಸಿ ಪಕ್ಷಕ್ಕೆ ಸೇರ್ಪಡೆ ಯಾಗುತ್ತಿರುವ ಎಲ್ಲರಿಗೂ ಸ್ವಾಗತ. ಮಾದರಿ ಜಿಲ್ಲೆ ಹಾಗೂ ತಾಲೂಕುಗಳನ್ನು ರೂಪಿಸುವ ಕಾರ್ಯದಲ್ಲಿ ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ತಿಳಿಸಿದರು.


ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ, ಪ್ರಶಿಕ್ಷಣ ಪ್ರಕೋಷ್ಠಗಳ ಸಂಚಾಲಕ ಆರ್.ಕೆ.ಸಿದ್ದರಾಮಣ್ಣ, ಪ್ರಮುಖರಾದ ಗೀರೀಶ್ ಪಟೇಲ್, ಎನ್.ನಾಗರಾಜ್, ಎಸ್.ಎನ್.ಚನ್ನಬಸಪ್ಪ, ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

Exit mobile version