ಬೆಂಗಳೂರು: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ’ಮಾಂಡೌಸ್’ ಚಂಡಮಾರುತ ದಿಂದ ಉತ್ತರ ಕರಾವಳಿ ತಮಿಳುನಾಡು, ಪುದುಚೇರಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದ್ದು, ಪಕ್ಕದ ದಕ್ಷಿಣ ಕರಾವಳಿ ಆಂಧ್ರಪ್ರದೇಶ
ಮತ್ತು ಉತ್ತರ ಒಳನಾ ಡಿನ ತಮಿಳುನಾಡು ಮತ್ತು ರಾಯಲಸೀಮಾದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ
.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರಿನಲ್ಲಿ ಇಂದಿನಿಂದ ಡಿಸೆಂಬರ್ 13 ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಡಿಸೆಂಬರ್ ೧೩ರವರೆಗೆ ಹಳದಿ ಅಲರ್ಟ್ ಘೋಷಿಸಿದೆ.