Site icon TUNGATARANGA

ಶಿವಮೊಗ್ಗ ಸೇರಿದಂತೆ ಬಹಳಷ್ಟು ಕಡೆ ಚಳಿ ಜೊತೆ ಮಾಮೂಲಿ ಮಳೆ…, ಭಾನುವಾರದ “ಡವಡವ” ಬುಧವಾರದವರೆಗೆ ಯಾಕೆ ಗೊತ್ತಾ?

ಶಿವಮೊಗ್ಗ, ಡಿ.11:

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ ಸೇರಿದಂತೆ ಬಹಳಷ್ಟು ಕಡೆ ಚಳಿ ಜೊತೆ ಮಾಮೂಲಿ ಮಳೆ ಬೀಳುವ ಸಾದ್ಯತೆಯಿದೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗಲಿದ್ದು, 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಕರಾವಳಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ಶನಿವಾರದಿಂದ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಶಿವಮೊಗ್ಗ ಪರಿಸ್ಥಿತಿ ಇವತ್ತು ವಿಚಿತ್ರವಾಗಿದೆ. ಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಇದೇ ವೇಳೆ ರಾಜ್ಯದ ಪ್ರದೇಶಗಳಲ್ಲಿ ವಿಪರೀತ ಚಳಿಯ ವಾತಾವರಣ ಮುಂದುವರೆದಿದೆ.

Exit mobile version